ಇಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಆಂಬ್ಯುಲೆನ್ಸ್‌ನಲ್ಲಿ ಗರ್ಭಿಣಿ ಮಹಿಳೆಯನ್ನು ಹೊತ್ತೊಯ್ಯುತ್ತಿದ್ದ ವೇಳೆಯಲ್ಲಿ ಗಾಡಿ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡ ಪರಿಣಾಮ ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ತುಂಬು ಗರ್ಭಿಣಿ ಮತ್ತು ಆಕೆಯ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದು, ಆಂಬ್ಯುಲೆನ್ಸ್ ಬೆಂಕಿಗಾಹುತಿಯಾದ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಇತ್ತೀಚಿಗೆ ವಾಹನಗಳಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಳ್ಳುವಂತಹ ಘಟನೆಗಳು ಬಹಳಷ್ಟು ನಡೆಯುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರಿನಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಕಾರ್ ಒಂದಕ್ಕೆ ಬೆಂಕಿ ಹತ್ತಿಕೊಂಡ ಆಘಾತಕಾರಿ ಘಟನೆ ನಡೆದಿತ್ತು. ಇದೀಗ ಇಂತಹದ್ದೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯನ್ನು ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆ ವಾಹನದಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ತುಂಬು ಗರ್ಭಿಣಿ ಮತ್ತು ಆಕೆಯ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದು, ಆಂಬ್ಯುಲೆನ್ಸ್ ಬೆಂಕಿಗಾಹುತಿಯಾದ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ನಡುರಸ್ತೆಯಲ್ಲಿ ಇಂಜಿನ್‌ಗೆ ಬೆಂಕಿ ತಗುಲಿದ ಪರಿಣಾಮ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಗರ್ಭಿಣಿ ಮಹಿಳೆಯನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ತುಂಬು ಗರ್ಭಿಣಿಯನ್ನು ಎರಾಂಡೋಲ್ ಸರ್ಕಾರಿ ಆಸ್ಪತ್ರೆಯಿಂದ ಜಲಂಗಾವ್ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ದಾದಾ ವಾಡಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಆಂಬ್ಯುಲೆನ್ಸ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಇದರಿಂದ ಎಚ್ಚೆತ್ತುಕೊಂಡ ಚಾಲಕ ಗಾಡಿ ನಿಲ್ಲಿಸಿ ಗರ್ಭಿಣಿ ಮಹಿಳೆ ಮತ್ತು ಆಕೆಯ ಕುಟುಂಬಸ್ಥರನ್ನು ಕೆಳಗಿಳಿಸಿ ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದಾದ ಸ್ಪಲ್ಪ ಹೊತ್ತಿಗೆ ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಚಾಲಕ ಸಮಯ ಪ್ರಜ್ಞೆಯಿಂದಾಗಿ ಗರ್ಭಿಣಿ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
https://twitter.com/harshtrivediii/status/1856767231792681101
ಈ ಕುರಿತ ವಿಡಿಯೋವನ್ನು ಹರ್ಷ್ ತ್ರಿವೇದಿ (harshtrivediii) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಆಂಬ್ಯುಲೆನ್ಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅದರಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಭಯಾನಕ ದೃಶ್ಯವನ್ನು ಕಾಣಬಹುದು. ಈ ಭಯಾನಕ ದೃಶ್ಯವನ್ನು ಅಲ್ಲಿದ್ದ ಜನರೆಲ್ಲರೂ ಬೆಚ್ಚಿ ಬಿದ್ದಿದ್ದಾರೆ.