Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • Virat Kohli: 300 ಪ್ಲಸ್ ರನ್: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ
Sports

Virat Kohli: 300 ಪ್ಲಸ್ ರನ್: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

April 27, 2023
samagrasuddi

IPL 2023: ಐಪಿಎಲ್​ನ 16ನೇ ಸೀಸನ್​ನಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 300 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಐಪಿಎಲ್​ನಲ್ಲಿ ಸತತವಾಗಿ ಮುನ್ನರಕ್ಕೂ ಅಧಿಕ ರನ್​ಗಳಿಸಿದ ವಿಶೇಷ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ.ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 14 ಸೀಸನ್​ಗಳಲ್ಲಿ ಸತತವಾಗಿ 300 ಕ್ಕೂ ಅಧಿಕ ರನ್​ಗಳಿಸುತ್ತಾ ಬಂದಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ 14 ಸೀಸನ್​ನಲ್ಲಿ 300+ ರನ್ ಕಲೆಹಾಕಿಲ್ಲ.ಇದಕ್ಕೂ ಮುನ್ನ ಈ ದಾಖಲೆ ಶಿಖರ್ ಧವನ್ ಹಾಗೂ ಸುರೇಶ್ ರೈನಾ ಹೆಸರಿನಲ್ಲಿತ್ತು. ಧವನ್ ಸತತ 12 ಸೀಸನ್​ಗಳಲ್ಲಿ ಮೂರಕ್ಕೂ ಅಧಿಕ ರನ್​ಗಳಿಸಿ ಮಿಂಚಿದ್ದಾರೆ.ಹಾಗೆಯೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕೂಡ ಸತತ 12 ಸೀಸನ್​ಗಳಲ್ಲಿ 300+ ರನ್​ ಕಲೆಹಾಕಿ ವಿಶೇಷ ದಾಖಲೆ ಬರೆದಿದ್ದರು.ಇದೀಗ ಇವರೆಲ್ಲರನ್ನೂ ಹಿಂದಿಕ್ಕಿ ವಿರಾಟ್ ಕೊಹ್ಲಿ ಸತತ 14ನೇ ಸೀಸನ್​ನಲ್ಲಿ 300 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಪ್ರಸ್ತುತ ಐಪಿಎಲ್​ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಕಿಂಗ್ ಕೊಹ್ಲಿ 8 ಇನಿಂಗ್ಸ್​ಗಳಲ್ಲಿ ಒಟ್ಟು 333 ರನ್​ಗಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ 2ನೇ ಸ್ಥಾನದಲ್ಲಿದ್ದಾರೆ.ಇದಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಒಟ್ಟು 53 ಬಾರಿ ಐವತ್ತಕ್ಕಿಂತ ಹೆಚ್ಚಿನ ರನ್​ಗಳಿಸಿದ್ದಾರೆ.ಹಾಗೆಯೇ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ ಕೂಡ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಇದುವರೆಗೆ 6903 ರನ್​ಗಳಿಸಿದ್ದು, ಇನ್ನು 97 ರನ್​ಗಳಿಸಿದರೆ ಐಪಿಎಲ್​ನಲ್ಲಿ 7 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

source https://tv9kannada.com/photo-gallery/cricket-photos/ipl-2023-most-times-300-plus-runs-in-ipl-season-kannada-news-zp-au50-565235.html

Post navigation

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು
ಹಲವು ದೊಡ್ಡ ಕಾಯಿಲೆಗಳ ಅಪಾಯ ತಗ್ಗಿಸುತ್ತದೆ ಕೆಫೆನ್, ನಿತ್ಯ ಎಷ್ಟು ಸೇವಿಸಬೇಕು?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
  • Horoscope Today, 23 March ಇಂದು ಈ ರಾಶಿಯವರು ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹಣ ವ್ಯಯಿಸುವ ಸಾಧ್ಯತೆ ಇದೆ.
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
Copyright © 2026
CONTACT US
Theme by: Theme Horse
Proudly Powered by: WordPress