Skip to content
  • Tuesday, March 24, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Virat Kohli: ಸೋತರೂ ಅಭಿಮಾನಿಗಳನ್ನು ರಂಜಿಸಿದ ವಿರಾಟ್ ಶತಕ: ಕೊಹ್ಲಿಯಿಂದ ದಾಖಲೆಯ ಸೆಂಚುರಿ
Sports

Virat Kohli: ಸೋತರೂ ಅಭಿಮಾನಿಗಳನ್ನು ರಂಜಿಸಿದ ವಿರಾಟ್ ಶತಕ: ಕೊಹ್ಲಿಯಿಂದ ದಾಖಲೆಯ ಸೆಂಚುರಿ

May 22, 2023
samagrasuddi

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಕೂಡ ಪ್ರವೇಶಿಸದೆ ಟೂರ್ನಿಯಿಂದ ಹೊರಬಿದ್ದಿದೆ. ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಾಣುವ ಮೂಲಕ ಐಪಿಎಲ್ 2023 ರಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತು.ಆದರೆ, ಆರ್​ಸಿಬಿ ಮಾಜಿ ನಾಯಕ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಅಭಿಮಾನಿಗಳನ್ನು ರಂಜಿಸಿದರು. ಮೊದಲ ಓವರ್​ನಿಂದ ಕೊನೆಯ ಓವರ್ ವರೆಗೂ ಕ್ರೀಸ್​ನಲ್ಲೇ ಇದ್ದ ಕೊಹ್ಲಿ 61 ಎಸೆತಗಳಲ್ಲಿ 13 ಫೋರ್, 1 ಸಿಕ್ಸರ್​ನೊಂದಿಗೆ ಅಜೇಯ 101 ರನ್ ಚಚ್ಚಿದರು.ಒಂದೆಡೆ ವಿಕೆಟ್​​ ಉರುಳುತ್ತಿದ್ದರೆ ಅತ್ತ ವಿರಾಟ್​ ಕೊಹ್ಲಿ ಏಕಾಂಗಿಯಾಗಿ ಇನ್ನಿಂಗ್ಸ್​​ ಕಟ್ಟಿ ತಮ್ಮ ಅದ್ಭುತ ಸ್ಟೈಲಿಶ್ ಹೊಡೆತಗಳ ಮೂಲಕ ಗಮನ ಸೆಳೆದರು. ಜೊತೆಗೆ ಹಲವು ದಾಖಲೆಗಳನ್ನು ಕೂಡ ನಿರ್ಮಾಣ ಮಾಡಿದರು.ವಿರಾಟ್ ಕೊಹ್ಲಿ ಪ್ರಸಕ್ತ ಸಾಲಿನಲ್ಲಿ ಎರಡನೇ ಶತಕಗಳಿಸುವುದರೊಂದಿಗೆ ಐಪಿಎಲ್​​ ಇತಿಹಾಸದಲ್ಲೇ ಅತಿ ಹೆಚ್ಚು ಶತಕಗಳಿಸಿದ ಆಟಗಾರ ಎನ್ನಿಸಿಕೊಂಡರು.ಇದು ಕೊಹ್ಲಿಯ 7ನೇ ಶತಕ. ಕಳೆದ ಪಂದ್ಯದಲ್ಲಿ ಹೈದರಾಬಾದ್​ ವಿರುದ್ಧ ಶತಕ ಬಾರಿಸಿ ಕ್ರಿಸ್​ ಗೇಲ್​ ಜತೆ ಜಂಟಿ ದಾಖಲೆ ಹೊಂದಿದ್ದರು. ಗೇಲ್​ ಅವರು 6 ಐಪಿಎಲ್​ ಶತಕ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ರಾಜಸ್ಥಾನ್​ ತಂಡದ ಆಟಗಾರ ಜಾಸ್​ ಬಟ್ಲರ್​ (5 ಶತಕ) ಅವರು ಕಾಣಿಸಿಕೊಂಡಿದ್ದಾರೆ.ಆರ್​ಸಿಬಿ ಪರ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿಯ ಪಾಲಾಗಿದೆ. ಅಂತೆಯೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಟಗಾರ ಕೊಹ್ಲಿ ಆಗಿದ್ದಾರೆ.ಇವುಗಳ ಜೊತೆಗೆ ಐಪಿಎಲ್​ ಇತಿಹಾಸದಲ್ಲೇ ಒಂದರ ಹಿಂದೆ ಒಂದರಂತೆ ಸತತ 2 ಶತಕ ಬಾರಿಸಿದ ಮೂರನೇ ಬ್ಯಾಟರ್ ಕೊಹ್ಲಿ ಆಗಿದ್ದಾರೆ. ಇದಕ್ಕೂ ಮುನ್ನ ಶಿಖರ್ ಧವನ್ (2021) ಹಾಗೂ ಜೋಸ್ ಬಟ್ಲರ್ (2022) ಮಾತ್ರ ಈ ಸಾಧನೆ ಗೈದಿದ್ದರು.

source https://tv9kannada.com/photo-gallery/cricket-photos/record-century-by-virat-kohli-king-kohli-entertains-fans-despite-losing-during-rcb-vs-gt-ipl-2023-vb-584210.html

Tags: Cricket, IPL, RCB, samagrasuddi, T-20, TATA IPL 2023, Virat Kohli, ಸಮಗ್ರ ಸುದ್ದಿ

Post navigation

2000 ನೋಟುಗಳ ವಿನಿಮಯದ ಕುರಿತು SBI ಮಹತ್ವದ ಘೋಷಣೆ : ನಿಮ್ಮಲ್ಲಿರುವ ನೋಟು ಬದಲಾಯಿಸಲು ನೀವು ಏನು ಮಾಡಬೇಕು ? ಇಲ್ಲಿದೆ ಮಾಹಿತಿ..
Faf Du Plessis: ಪಂದ್ಯ ಮುಗಿದ ಬಳಿಕ ನೋವು ತೋಡಿಕೊಂಡ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress