IPL 2023: ದಾಖಲೆಯ ಜೊತೆಯಾಟವಾಡಿದ ವಿರಾಟ್ ಕೊಹ್ಲಿ-ಫಾಫ್ ಡುಪ್ಲೆಸಿಸ್

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.ಪರಿಣಾಮ 12 ಓವರ್​ಗಳಲ್ಲಿ ಆರ್​ಸಿಬಿ ತಂಡದ ಮೊತ್ತವು 100ರ ಗಡಿದಾಟಿತು. ಇದಾದ ಬಳಿಕ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಫಾಫ್ ಡುಪ್ಲೆಸಿಸ್ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ವಿರಾಟ್ ಕೊಹ್ಲಿ 40 ಎಸೆತಗಳನ್ನು ಎದುರಿಸಿದ ಅರ್ಧಶತಕ ಬಾರಿಸಿದರು.ಅಲ್ಲದೆ ಮೊದಲ ವಿಕೆಟ್​ಗೆ 137 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಈ ಜೊತೆಯಾಟದೊಂದಿಗೆ ಆರ್​ಸಿಬಿ ಪರ  ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಗಳ ಪಟ್ಟಿಯಲ್ಲಿ ಫಾಫ್ ಡುಪ್ಲೆಸಿಸ್-ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದರು.ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ ಹಾಗೂ ಕ್ರಿಸ್ ಗೇಲ್. ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಯೂನಿವರ್ಸ್ ಬಾಸ್-ಕಿಂಗ್ ಕೊಹ್ಲಿ ಜೋಡಿ ಒಟ್ಟು 4 ಬಾರಿ ಶತಕದ ಜೊತೆಯಾಟವಾಡಿದ್ದರು.ಇದೀಗ ಫಾಫ್ ಡುಪ್ಲೆಸಿಸ್-ವಿರಾಟ್ ಕೊಹ್ಲಿ ಆರಂಭಿಕರಾಗಿ ಮೂರನೇ ಬಾರಿಗೆ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಓಪನರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ಈ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲೂ ಹಾಗೂ ದ್ವಿತೀಯ ಸ್ಥಾನದಲ್ಲೂ ಜೊತೆಗಾರನಾಗಿ ವಿರಾಟ್ ಕೊಹ್ಲಿ ಇರುವುದು ವಿಶೇಷ.

source https://tv9kannada.com/photo-gallery/cricket-photos/ipl-2023-virat-kohli-faf-most-century-partnerships-for-an-rcb-opening-pair-kannada-news-zp-au50-560132.html

Leave a Reply

Your email address will not be published. Required fields are marked *