Virat Kohli: ಮೈದಾನಕ್ಕಿಳಿಯದೇ ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2023: ಐಪಿಎಲ್ ಸೀಸನ್ 16 ನಲ್ಲಿ ಹಲವು ದಾಖಲೆ ಬರೆದಿದ್ದ ವಿರಾಟ್ ಕೊಹ್ಲಿ ಇದೀಗ ಮೈದಾನಕ್ಕಿಳಿಯದೇ ಹೊಸ ದಾಖಲೆ ನಿರ್ಮಿಸಿದ್ದಾರೆ. ಹೌದು, ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 250 ಮಿಲಿಯನ್ ಫಾಲೋವರ್ಸ್​ ಸಂಪಾದಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಂದರೆ ಇನ್​ಸ್ಟಾಗ್ರಾಮ್​ನಲ್ಲಿ 25 ಕೋಟಿ ಫಾಲೋವರ್ಸ್ ಹೊಂದಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ದಾಖಲೆಯನ್ನೂ ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಲ್ಲದೆ ಇನ್​ಸ್ಟಾಗ್ರಾಮ್​ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಮೂರನೇ ಕ್ರೀಡಾಪಟು ಎಂಬ ಹಿರಿಮೆಗೂ ಕೊಹ್ಲಿ ಪಾತ್ರರಾಗಿದ್ದಾರೆ.ಈ ಪಟ್ಟಿಯಲ್ಲಿ ಖ್ಯಾತ ಫುಟ್​ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಪೋರ್ಚುಗಲ್ ಆಟಗಾರ ಒಟ್ಟು 585 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.ಇನ್ನು ಅರ್ಜೆಂಟೀನಾದ ಶ್ರೇಷ್ಠ ಫುಟ್​ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ 462 ಮಿಲಿಯನ್ ಫಾಲೋವರ್ಸ್​ನೊಂದಿಗೆ ಎರಡನೇ ಸ್ಥಾನ ಅಲಂಕರಿಸಿದ್ದಾರೆ.ಇದೀಗ 250 ಮಿಲಿಯನ್ ಫಾಲೋವರ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೇರಿದ್ದು, ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

source https://tv9kannada.com/photo-gallery/cricket-photos/virat-kohli-250-million-instagram-followers-record-kannada-news-zp-587064.html

Views: 0

Leave a Reply

Your email address will not be published. Required fields are marked *