Rohit Sharma – Virat Kohli: ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿದ್ದರು. ಇದೀಗ ಟೆಸ್ಟ್ ಕ್ರಿಕೆಟ್ಗೂ ಗುಡ್ ಬೈ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹಿಟ್ಮ್ಯಾನ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿರುವುದಾಗಿ ತಿಳಿಸಿದ್ದಾರೆ.




Source : TV9 Kannada