Virat Kohli: ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

WTC Final 2023: ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 44 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ್ದಾರೆ.ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಿದರು. 60 ಎಸೆತಗಳನ್ನು ಎದುರಿಸಿದ ವಿರಾಟ್ 7 ಫೋರ್​ನೊಂದಿಗೆ ಅಜೇಯ 44 ರನ್ ಬಾರಿಸಿ 5ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.ವಿಶೇಷ ಎಂದರೆ ಈ 44 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆಗೈದ ಭಾರತದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ಸಾಧನೆ ಮಾಡಿದ ಭಾರತೀಯರ ಪಟ್ಟಿ ಈ ಕೆಳಗಿನಂತಿದೆ...1- ಸಚಿನ್ ತೆಂಡೂಲ್ಕರ್: ಆಸ್ಟ್ರೇಲಿಯಾ ವಿರುದ್ಧ 74	 ಟೆಸ್ಟ್ ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 3630 ರನ್​ ಕಲೆಹಾಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.2- ವಿವಿಎಸ್ ಲಕ್ಷ್ಮಣ್: ಟೀಮ್ ಇಂಡಿಯಾದ ಮಾಜಿ ಟೆಸ್ಟ್ ಸ್ಪೆಷಲಿಸ್ಟ್ ವಿವಿಎಸ್ ಲಕ್ಷ್ಮಣ್ ಆಸ್ಟ್ರೇಲಿಯಾ ವಿರುದ್ಧ 54 ಇನಿಂಗ್ಸ್​ನಲ್ಲಿ 2434 ರನ್​ ಕಲೆಹಾಕಿದ್ದಾರೆ.3- ರಾಹುಲ್ ದ್ರಾವಿಡ್: ಆಸ್ಟ್ರೇಲಿಯಾ ವಿರುದ್ಧ 60 ಟೆಸ್ಟ್ ಇನಿಂಗ್ಸ್ ಆಡಿರುವ ದಿ ವಾಲ್ ಖ್ಯಾತಿಯ ದ್ರಾವಿಡ್ ಒಟ್ಟು 2143 ರನ್​ ಕಲೆಹಾಕಿದ್ದಾರೆ.4- ಚೇತೇಶ್ವರ ಪೂಜಾರ: ಆಸೀಸ್ ವಿರುದ್ಧ 45 ಟೆಸ್ಟ್​ ಇನಿಂಗ್ಸ್​ಗಳಲ್ಲಿ 2074 ರನ್​ ಕಲೆಹಾಕಿರುವ ಪೂಜಾರ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.5- ವಿರಾಟ್ ಕೊಹ್ಲಿ: ಆಸ್ಟ್ರೇಲಿಯಾ ವಿರುದ್ಧ 25 ಟೆಸ್ಟ್ ಪಂದ್ಯಗಳಲ್ಲಿ 44 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 2037* ರನ್​ ಕಲೆಹಾಕಿದ್ದಾರೆ. ಈ ಮೂಲಕ ಆಸೀಸ್ ವಿರುದ್ಧ 2 ಸಾವಿರ ರನ್ ಪೂರೈಸಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

source https://tv9kannada.com/photo-gallery/cricket-photos/virat-kohli-record-india-batters-with-2000-test-runs-vs-australia-kannada-news-zp-598571.html

Leave a Reply

Your email address will not be published. Required fields are marked *