Waqf Bill: ವಕ್ಫ್‌ ಬಿಲ್‌ಗೆ ಈಗ ಕಾನೂನಿನ ಮುದ್ರೆ! ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳಿಂದ ಅಂಕಿತ.

ಈ ಮಸೂದೆ ಮಂಡನೆ ವೇಳೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕೋಲಾಹಲವೇ ಉಂಟಾಗಿತ್ತು. ಉಭಯ ಸದನಗಳಲ್ಲಿ ಸುದೀರ್ಘ 13 ಗಂಟೆಗಳಿಗೂ ಹೆಚ್ಚು ಕಾಲ ಬಿಸಿ ಬಿಸಿ ಚರ್ಚೆ ನಡೆದಿತ್ತು. ಬಳಿಕ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಿ, ರಾಷ್ಟ್ರಪತಿಯವರ ಅಂಕಿತಕ್ಕೆ ಕಳಿಸಲಾಗಿತ್ತು. ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಸೂದೆಗೆ ಸಹಿ ಹಾಕಿದ್ದಾರೆ.

ದೆಹಲಿ: ದೇಶದ ಇತಿಹಾಸದಲ್ಲೇ ಐತಿಹಾಸಕ ಮಸೂದೆ ಅಂತಾನೆ ಕರೆಸಿಕೊಂಡ ವಕ್ಫ್ ತಿದ್ದುಪಡಿ ಮಸೂದೆಗೆ (Waqf Amendment Bill) ರಾಷ್ಟ್ರಪತಿ (President) ಅಂಕಿತ ಬಿದ್ದಿದೆ. ವಕ್ಫ್ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ (Congress) ಸೇರಿದಂತೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೇ ಮುಸ್ಲಿಂ ನಾಯಕರು (Muslim leaders), ಸಂಘಟನೆಗಳೂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಮಸೂದೆ ಮಂಡನೆ ವೇಳೆ ಲೋಕಸಭೆ (Lok Sabha) ಹಾಗೂ ರಾಜ್ಯಸಭೆಯಲ್ಲಿ (Rajya Sabha) ಕೋಲಾಹಲವೇ ಉಂಟಾಗಿತ್ತು. ಉಭಯ ಸದನಗಳಲ್ಲಿ ಸುದೀರ್ಘ 13 ಗಂಟೆಗಳಿಗೂ ಹೆಚ್ಚು ಕಾಲ ಬಿಸಿ ಬಿಸಿ ಚರ್ಚೆ ನಡೆದಿತ್ತು. ಬಳಿಕ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಿ, ರಾಷ್ಟ್ರಪತಿಯವರ ಅಂಕಿತಕ್ಕೆ ಕಳಿಸಲಾಗಿತ್ತು. ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಮಸೂದೆಗೆ ಸಹಿ ಹಾಕಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆ ದೊರೆತಿದೆ. ವಕ್ಫ್ ತಿದ್ದುಪಡಿ ಮಸೂದೆ 2025 ಶನಿವಾರ ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ 2025 ಕ್ಕೆ ಸಹ ತಮ್ಮ ಒಪ್ಪಿಗೆ ನೀಡಿದ್ದು, ಸಹಿ ಮಾಡಿದ್ದಾರೆ.

https://twitter.com/PTI_News/status/1908582242370363764

ಕೇಂದ್ರ ಸರ್ಕಾರಿಂದ ಅಧಿಕೃತ ಮಾಹಿತಿ

“ಸಂಸತ್ತಿನ ಈ ಕಾಯಿದೆಯು ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿದೆ ಮತ್ತು ಸಾಮಾನ್ಯ ಮಾಹಿತಿಗಾಗಿ ಇಲ್ಲಿ ಪ್ರಕಟಿಸಲಾಗಿದೆ: ವಕ್ಫ್ (ತಿದ್ದುಪಡಿ) ಕಾಯಿದೆ, 2025” ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಲೋಕಸಭೆಯಲ್ಲಿ 288 ಮತಗಳನ್ನು ಪಡೆದಿದ್ದ ಮಸೂದೆ

ವಕ್ಪ್ ತಿದ್ದುಪಡಿ ಮಸೂದೆಯನ್ನು ಇದೇ ಏಪ್ರಿಲ್ 2ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಕ್ಫ್ ಮಸೂದೆ ಮಂಡಿಸಿದ್ದರು. ಭಾರೀ ವಿರೋಧ, ಸುದೀರ್ಫ ಚರ್ಚೆಯ ಬಳಿಕ ಅಂದೇ ತಡರಾತ್ರಿ 1.30ರ ಸುಮಾರಿಗೆ ವೋಟಿಂಗ್ ಮಾಡಲಾಗಿತ್ತು. ಆಗ ಎಲೆಕ್ಟ್ರಾನಿಕ್ ಮತದಾನದ ಮೂಲಕ ನಡೆದ ಪ್ರಕ್ರಿಯೆಯಲ್ಲಿ ಮಸೂದೆಗೆ 288 ಮತಗಳು ಒಲಿದವು, ಆದರೆ ಇನ್ನೊಂದೆಡೆ 232 ಸದಸ್ಯರು ವಿರೋಧಿಸಿದರು. ಇದರೊಂದಿಗೆ, ಅಸಾದುದ್ದೀನ್ ಓವೈಸಿ ಮತ್ತು ಗೌರವ್ ಗೊಗೊಯ್ ಅವರ ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು. ಜೊತೆಗೆ ಕೆ.ಸಿ. ವೇಣುಗೋಪಾಲ್ ಮತ್ತು ಸೌಗತ ರಾಯ್ ಅವರು ಮಸೂದೆಯಲ್ಲಿ ಒತ್ತಾಯಿಸಿದ ತಿದ್ದುಪಡಿಗಳು ಸಹ ತಿರಸ್ಕರಿಸಲಾಗಿತ್ತು.

ರಾಜ್ಯಸಭೆಯಲ್ಲೂ ಗೆದ್ದಿದ್ದ ಮಸೂದೆ

ಬಳಿಕ ಮರುದಿನ ಅಂದರೆ ಏಪ್ರಿಲ್ 3ರಂದು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು. ಅಲ್ಲೂ ಕೂಡ ಭಾರೀ ವಿರೋಧ ವ್ಯಕ್ತವಾಯ್ತು. ಸುದೀರ್ಘ ಚರ್ಚೆಯ ಬಳಿಕ ಮತದಾನ ನಡೆಸಲಾಯ್ತು. ಮಸೂದೆಯ ಪರವಾಗಿ 128 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 95 ಮತಗಳು ಚಲಾವಣೆಯಾದವು. ಸದನವು ವಿರೋಧ ಪಕ್ಷದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತದ ಮೂಲಕ ತಿರಸ್ಕರಿಸಿತು.

ಲೋಕಸಭೆ, ರಾಜ್ಯಸಭೆಯಲ್ಲಿ ದಾಖಲೆಯ ಸುದೀರ್ಘ ಚರ್ಚೆ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಕ್ಪ್ ತಿದ್ದುಪಡಿ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಸೇರಿದಂತೆ ಇಂಡಿಯಾ ಬಣದ ನಾಯಕರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದು ಇದು ಸಂವಿಧಾನ ಮತ್ತು ಮುಸ್ಲಿಂ ವಿರೋಧಿ ಅಂತ ಆರೋಪಿಸಿದ್ದರು. ಸಂಸತ್‌ನ ಉಭಯ ಸದನಗಳಲ್ಲೂ ಸುಮಾರು 13 ಗಂಟೆಗೂ ಅಧಿಕ ಕಾಲ ಈ ಬಗ್ಗೆ ಚರ್ಚೆ ನಡೆದಿದ್ದು, ಇದೊಂದು ಐತಿಹಾಸಕ ದಾಖಲೆ ಅಂತಾನೇ ಕರೆಯಲ್ಪಟ್ಟಿತು.

News 18 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *