Karnataka Bandh: ಕಾವೇರಿ ನದಿ ನೀರಿನ ವಿಚಾರವಾಗಿ ನಾಳೆ(ಸೆಪ್ಟೆಂಬರ್ 26 ಬೆಂಗಳೂರು ಬಂದ್ಗೆ ತೀರ್ಮಾನಿಸಲಾಗಿದೆ. ಮತ್ತೊಂದೆಡೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ವಾಟಳ್ ನಾಗರಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು, (ಸೆಪ್ಟೆಂಬರ್ 25): ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಇದೇ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಡಲಾಗಿದೆ. ಇಂದು(ಸೆಪ್ಟೆಂಬರ್ 25) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್ಗೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆ.29ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.
ಕಾವೇರಿ ನದಿ ನೀರು ಹಂಚಿಕೆ ವಿವಾದ, ಮಹದಾಯಿ ಯೋಜನೆ, ಕೃಷ್ಣಾನದಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ವಿಚಾರವಾಗಿ ಸೆ.29ರ ಕರ್ನಾಟಕ ಬಂದ್ಗೆ ಎಲ್ಲರೂ ಸಹಕಾರ ನೀಡಬೇಕು. ಅಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜನೆ ಮಾಡಲಾಗುತ್ತದೆ. ಟೌನ್ಹಾಲ್ನಿಂದ ಫ್ರೀಡಂಪಾರ್ಕ್ವರೆಗೂ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ ಎಂದು ವಿವರಿಸಿದರು.
ಇನ್ನು ಕರ್ನಾಟಕ ಬಂದ್ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಬೆಂಬಲವನ್ನು ಘೋಷಿಸಿದ್ದಾರೆ. ಇನ್ನು ಇದಕ್ಕೆ ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ ಬದಲಾಗಿ ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1