India vs Pakistan: ಜುಲೈ 18 ರಿಂದ ಆರಂಭವಾಗಿರುವ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್‌ನ ಎರಡನೇ ಆವೃತ್ತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಜುಲೈ 20 ರಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಭಾರತೀಯ ಸಮಯ ರಾತ್ರಿ 9 ಗಂಟೆಗೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಫ್ಯಾನ್‌ಕೋಡ್‌ನಲ್ಲಿ ವೀಕ್ಷಿಸಬಹುದು.
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (World Championship of Legends) ಲೀಗ್‌ನ ಎರಡನೇ ಆವೃತ್ತಿ ನಿನ್ನೆಯಿಂದ ಅಂದರೆ ಜುಲೈ 18 ರಿಂದ ಆರಂಭವಾಗಿದೆ. ಲೀಗ್‌ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಚಾಂಪಿಯನ್ ತಂಡವನ್ನು ಮಣಿಸಿರುವ ಪಾಕಿಸ್ತಾನ ಚಾಂಪಿಯನ್ ತಂಡ ಇದೀಗ ಕಳೆದ ಆವೃತ್ತಿಯ ಚಾಂಪಿಯನ್ ಆಗಿದ್ದ ಭಾರತ ಚಾಂಪಿಯನ್ಸ್ ತಂಡವನ್ನು ಎದುರಿಸಲಿದೆ. ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಕದನವನ್ನು ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾದು ಕುಳಿತಿರುತ್ತಾರೆ. ಅದರಲ್ಲೂ ಆಪರೇಷನ್ ಸಿಂಧೂರ್ ಬಳಿಕ ಉಭಯ ದೇಶಗಳ ಕ್ರಿಕೆಟ್ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವದರಿಂದ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಭಾನುವಾರ ಅಂದರೆ ಜುಲೈ 20 ರಂದು ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವು ಭಾರತೀಯ ಸಮಯ ರಾತ್ರಿ 9:00 ಗಂಟೆಗೆ ಪ್ರಾರಂಭವಾಗುತ್ತದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವನ್ನು ನಾವು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಪ್ರಸಾರವಾಗಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವನ್ನು ಫ್ಯಾನ್‌ಕೋಡ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ಚಾಂಪಿಯನ್: ಯುವರಾಜ್ ಸಿಂಗ್, ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಪಿಯೂಷ್ ಚಾವ್ಲಾ, ಸ್ಟುವರ್ಟ್ ಬಿನ್ನಿ, ವರುಣ್ ಆರೋನ್, ವಿನಯ್ ಕುಮಾರ್, ಅಭಿಮನ್ಯು ಮಿಥುನ್, ಸಿದ್ಧಾರ್ಥ್ ಕೌಲ್, ಗುರುಕೀರತ್ ಮಾನ್.
ಪಾಕಿಸ್ತಾನ ಚಾಂಪಿಯನ್: ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಸರ್ಫರಾಜ್ ಅಹ್ಮದ್, ಶಾರ್ಜೀಲ್ ಖಾನ್, ವಹಾಬ್ ರಿಯಾಜ್, ಆಸಿಫ್ ಅಲಿ, ಶಾಹಿದ್ ಅಫ್ರಿದಿ, ಕಮ್ರಾನ್ ಅಕ್ಮಲ್, ಅಮೇರ್ ಯಾಮಿನ್, ಸೊಹೈಲ್ ಖಾನ್, ಸೊಹೈಲ್ ತನ್ವೀರ್.