
ಬೀದರ್: ರಾಜ್ಯ ಚುನಾವಣೆ ಅಖಾಡ ಸಿಕ್ಕಾಪಟ್ಟೆ ಬಿಸಿಯಾಗಿದೆ. ದೆಹಲಿಯಿಂದ ನಾಯಕರು ರಾಜ್ಯಕ್ಕೆ ಬಂದು ಪ್ರಚಾರ ನಡೆಸುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ಬೀದರ್ ಗೆ ಬಂದಿಳಿದಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಹುಮನಬಾದ್ ನಲ್ಲಿ ಆಯೋಜನೆ ಮಾಡಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ 9 ಜಿಲ್ಲೆಗಳಿಂದ ಸುಮಾರು ಒಂದು ಲಕ್ಷ ಜನ ಸೇರಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಿಂಗಾಯತರು, ಅಹಿಂದ ಮತಗಳನ್ನು ಸೆಳೆಯುವ ಪ್ರಯತ್ನ ಮಾಡುವಂತ ಭಾಷಣ ಮಾಡಲಾಗುತ್ತೆ.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಾಯಕರು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿದ್ದರು. ಕಾಂಗ್ರೆಸ್ ನ ಟಾಪ್ ನಾಯಕರು ಟೀಕೆ ಮಾಡಿದ್ಸಾರೆ. ಅಂಬೇಡ್ಕರ್ ಅವರನ್ನು ಸಹ ಇವರು ಬಿಟ್ಟಿಲ್ಲ. ಕಾಂಗ್ರೆಸ್ ನವರು ನಿಂದಿಸಿದ ಕಾರಣಕ್ಕೆ ಈ ಚುನಾವಣೆ ಮೂಲಕ ಉತ್ತರ ನೀಡಬೇಕಿದೆ ಎಂದಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಸೇರಿದಂತೆ ಹಲವು ಘಟಾನುಘಟಿ ನಾಯಕರು ಭಾಗಿಯಾಗಿದ್ದರು. ಲಕ್ಷಾಂತರ ಜನ ಮೋದಿಯವರನ್ನು ನೋಡಲು, ಅವರ ಭಾಷಣ ಕೇಳಲು ಬಂದಿದ್ದರು.
The post ಬೀದರ್ ಗೆ ಬಂದಿಳಿದ ಪ್ರಧಾನಿ ಮೋದಿ : ಪ್ರಚಾರದ ವೇಳೆ ಏನಂದ್ರು..? first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/oSgerkp
via IFTTT