Jaggery Vs Honey Which is Best: ಬೆಲ್ಲ ಮತ್ತು ಜೇನುತುಪ್ಪದಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ. ಹಾಗಾದ್ರೆ, ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ಎಂಬುದರ ಬಗ್ಗೆ ವಿವರವಾಗಿ ತಿಳಿಯೋಣ.

Jaggery Vs Honey Which is Best: ಬೆಲ್ಲ ಮತ್ತು ಜೇನುತುಪ್ಪದಿಂದ ದೇಹದ ಆರೋಗ್ಯಕ್ಕೆ ವಿವಿಧ ಪ್ರಯೋಜನಗಳು ಲಭಿಸುತ್ತವೆ. ಇದರಲ್ಲಿ ಹಲವು ಔಷಧೀಯ ಗುಣಗಳನ್ನು ಹೊಂದಿವೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಆಯುರ್ವೇದದಲ್ಲಿ ಬೆಲ್ಲ ಮತ್ತು ಜೇನುತುಪ್ಪವನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ.
ಬೆಲ್ಲ ಮತ್ತು ಜೇನುತುಪ್ಪವು ಆರೋಗ್ಯವನ್ನು ಮಾತ್ರವಲ್ಲದೇ ಸೌಂದರ್ಯವನ್ನು ಹೆಚ್ಚಿಸುತ್ತದೆ. ಕೆಲವರು ಈ ಎರಡು ಪದಾರ್ಥಗಳನ್ನು ಸಕ್ಕರೆಗೆ ಬದಲಿಯಾಗಿ ಬಳಸುತ್ತಾರೆ. ಬೆಲ್ಲ ಅಥವಾ ಜೇನುತುಪ್ಪ, ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬುದರ ಮಾಹಿತಿ ಇಲ್ಲಿದೆ.

ಬೆಲ್ಲ: ಸಂಸ್ಕರಿಸಿದ ಬೆಲ್ಲವು ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಬಿ1, ಬಿ6 ಮತ್ತು ಸಿ ಹಾಗೂ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಪ್ರತಿದಿನ ಬೆಲ್ಲ ತಿನ್ನುವುದರಿಂದ ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇದು ಮಹಿಳೆಯರಲ್ಲಿ ರಕ್ತಹೀನತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.
ಬೆಲ್ಲವು ರಕ್ತವನ್ನು ಶುದ್ಧೀಕರಿಸುತ್ತದೆ. ಹೃದಯ ಹಾಗೂ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ. ಇದು ಕಣ್ಣುಗಳು, ಹೊಟ್ಟೆ ಮತ್ತು ಕಾಲುಗಳಲ್ಲಿನ ಉರಿಯೂತ ಕಡಿಮೆ ಮಾಡುತ್ತದೆ. ಬೆಲ್ಲವನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಬೆಲ್ಲದ ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆಯಾಸ ಹಾಗೂ ಆಲಸ್ಯ ನಿವಾರಣೆಯಾಗುತ್ತದೆ. ಜೊತೆಗೆ ತ್ವರಿತ ಶಕ್ತಿ ದೊರೆಯುತ್ತದೆ. ಇದರೊಂದಿಗೆ ಸ್ನಾಯುಗಳು ಮತ್ತು ಮೂಳೆಗಳು ಸಹ ಬಲಗೊಳ್ಳುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಜೇನುತುಪ್ಪ: ನಮ್ಮಲ್ಲಿ ಹಲವರು ಸಕ್ಕರೆಗೆ ಬದಲಿಯಾಗಿ ಜೇನುತುಪ್ಪ ಬಳಕೆ ಮಾಡುತ್ತಾರೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳು ಮತ್ತು ಹೆಚ್ಚಿನ ಸಂಖ್ಯೆಯ ಉತ್ಕರ್ಷಣ ನಿರೋಧಕಗಳು ಇರುತ್ತವೆ. ಉತ್ತಮ ಗುಣಮಟ್ಟದ ಜೇನುತುಪ್ಪವು ಫೀನಾಲಿಕ್ ಆಮ್ಲಗಳು, ಫ್ಲೇವನಾಯ್ಡ್‌ಗಳು ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇವು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ದೀರ್ಘಕಾಲದ ಕಾಯಿಲೆಗಳು ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತವೆ.

ಅನೇಕ ಜನರು ನಿಂಬೆ ರಸದೊಂದಿಗೆ ಜೇನುತುಪ್ಪ ಬೆರೆಸುತ್ತಾರೆ. ಇದನ್ನು ಈ ರೀತಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕವನ್ನು ನಿಯಂತ್ರಿಸುವುದರ ಜೊತೆಗೆ ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಕಾಯಿಲೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾರಕ ರೋಗಗಳ ವಿರುದ್ಧ ಹೋರಾಡುವ ಶಕ್ತಿಯೊಂದಿಗೆ ರೋಗನಿರೋಧಕ ಶಕ್ತಿಯೂ ಸುಧಾರಿಸುತ್ತದೆ. ಜೇನುತುಪ್ಪವು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಪ್ರೋಟೀನ್, ಸ್ಯಾಚುರೇಟೆಡ್ ಕೊಬ್ಬು ಹಾಗೂ ವಿಟಮಿನ್ ಬಿ6 ಮತ್ತು ಸಿ ಸಮೃದ್ಧವಾಗಿದೆ ಎಂದು ತಜ್ಞರು ವಿವರಿಸುತ್ತಾರೆ.

ಬೆಲ್ಲ Vs ಜೇನುತುಪ್ಪ ಯಾವುದು ಬೆಸ್ಟ್?: ಬೆಲ್ಲ ಮತ್ತು ಜೇನುತುಪ್ಪ ಎರಡೂ ಆರೋಗ್ಯಕ್ಕೆ ಒಳ್ಳೆಯದು. ಇವೆರಡೂ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತವೆ. ಜೇನುತುಪ್ಪವು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿದ್ದು, ಇದು ತೂಕ ಹೆಚ್ಚಾಗಲು ಮತ್ತು ರಕ್ತದಲ್ಲಿನ ಗ್ಲೂಕೋಸ್ ಹೆಚ್ಚಳಕ್ಕೆ ಕಾರಣವಾಗಬಹುದು. ಜೇನುತುಪ್ಪದ ಪ್ರಯೋಜನಗಳನ್ನು ಪಡೆಯಲು ನೀವು ಬಯಸಿದರೆ ಅದನ್ನು ಸ್ವಲ್ಪ ಮತ್ತು ನಿಯಂತ್ರಿತ ಪ್ರಮಾಣದಲ್ಲಿ ಸೇವಿಸಬೇಕಾಗುತ್ತದೆ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.
Source: ETV Bharath
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1