New Year: 2024ರಲ್ಲಿ ಟೀಮ್ ಇಂಡಿಯಾ ವೇಳಾ ಪಟ್ಟಿ ಹೇಗಿದೆ?

ಟೀಮ್ ಇಂಡಿಯಾ ವರ್ಷದ ಕೊನೆಯಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಸೋಲು ಕಂಡಿದೆ. ಈಗ ಮುಂದಿನ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಹಾಗಿದ್ದರೆ ಟೀಮ್ ಇಂಡಿಯಾ ಇನ್ನು ಮುರು ತಿಂಗಳ ಶೆಡ್ಯೂಲ್ ಹೇಗಿದೆ ಎಂಬ ಬಗ್ಗೆ ಕಂಪ್ಲೀಟ್ ಡಿಟೇಲ್ ಇಲ್ಲಿದೆ.

ಟೀಮ್ ಇಂಡಿಯಾ ಪಾಲಿಗೆ 2023 ಸಿಹಿ ಕಹಿಗಳಿಂದ ಕೂಡಿದೆ. ಐಸಿಸಿ ಟೂರ್ನಿಗಳ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ್ದು ಬಿಟ್ಟರೆ, ಪ್ರಸಕ್ತ ವರ್ಷ ಟೀಮ್ ಇಂಡಿಯಾ ಪಾಲಿಗೆ ಅಮೋಘ.. ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ಕೊನೆಯ ಪ್ರವಾಸವನ್ನು ಬೆಳೆಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಅಲ್ಲದೆ ಏಕದಿನ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಟೀಮ್ ಇಂಡಿಯಾ ವರ್ಷದ ಕೊನೆಯಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಸೋಲು ಕಂಡಿದೆ. ಈಗ ಮುಂದಿನ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಹಾಗಿದ್ದರೆ ಟೀಮ್ ಇಂಡಿಯಾ ಇನ್ನು ಮುರು ತಿಂಗಳ ಶೆಡ್ಯೂಲ್ ಹೇಗಿದೆ ಎಂಬ ಬಗ್ಗೆ ಕಂಪ್ಲೀಟ್ ಡಿಟೇಲ್ ಇಲ್ಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಜನವರಿ 3 ರಿಂದ ನಡೆಯಲಿದೆ. ಎರಡೂ ತಂಡಗಳು ಕೇಪ್ ಟೌನ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಮೂಲಕ ಟೀಂ ಇಂಡಿಯಾ ತನ್ನ ಹೊಸ ವರ್ಷವನ್ನು ಆರಂಭಿಸಲಿದೆ.

ಇದಾದ ಬಳಿಕ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ಸರಣಿ ಆಡಲಿದೆ. ಅಫ್ಘಾನಿಸ್ತಾನ ಹೊರತುಪಡಿಸಿ, ಭಾರತ ತಂಡವು ಯಾವ ತಂಡಗಳ ವಿರುದ್ಧ ಆಡಲಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತ-ಅಫ್ಘಾನಿಸ್ತಾನ ಟಿ20 ಸರಣಿ

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಜನವರಿ 11 ರಂದು ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಮೊಹಾಲಿಯಲ್ಲಿ ನಡೆಯಲಿದೆ. ಇದಾದ ಬಳಿಕ ಎರಡನೇ ಟಿ20 ಜನವರಿ 14ರಂದು ಗ್ವಾಲಿಯರ್‌ನಲ್ಲಿ, ಮೂರನೇ ಟಿ20 ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಅಫ್ಘಾನಿಸ್ತಾನ ಸರಣಿ ಬಳಿಕ ಇಂಗ್ಲೆಂಡ್ ತಂಡ ಭಾರತಕ್ಕೆ ಭೇಟಿ ನೀಡಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ.

ಮೊದಲ ಟೆಸ್ಟ್- ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ಇಂಗ್ಲೆಂಡ್‌ ವಿರುದ್ಧ ಎರಡನೇ ಟೆಸ್ಟ್ – ಫೆಬ್ರವರಿ 2 ರಿಂದ ವೈಜಾಗ್‌ನಲ್ಲಿ, ಮೂರನೇ ಟೆಸ್ಟ್- ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ,

ನಾಲ್ಕನೇ ಟೆಸ್ಟ್- ಫೆಬ್ರವರಿ 23 ರಿಂದ ರಾಂಚಿಯಲ್ಲಿ, ಐದನೇ ಟೆಸ್ಟ್ – ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳ ಸರಣಿಯ ನಂತರ ಐಪಿಎಲ್ 2024 ನಡೆಯಲಿದೆ. ಐಪಿಎಲ್ 2024 ಮಾರ್ಚ್ 22 ರಿಂದ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಐಪಿಎಲ್‌ಗೆ ಸಂಬಂಧಿಸಿದ ಯಾವುದೇ ಅಧಿಕೃತ ದಿನಾಂಕವನ್ನು ಇಲ್ಲಿಯವರೆಗೆ ಬಹಿರಂಗಪಡಿಸಲಾಗಿಲ್ಲ. ಆದರೆ 17 ನೇ ಸೀಸನ್ ಮಾರ್ಚ್ 22 ರಿಂದ ಪ್ರಾರಂಭವಾಗಬಹುದು ಎಂದು ನಂಬಲಾಗಿದೆ.

Source : https://m.dailyhunt.in/news/india/kannada/mykhelkannada-epaper-mykhelka/new+year+2024ralli+tim+indiya+vela+patti+hegide+-newsid-n569941982?listname=topicsList&topic=for%20you&index=1&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *