Cauvery Water Sharing Dispute: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿನ ವಿವಾದ ತಾರಕಕ್ಕೇರಿರುವ ನಡುವೆ ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೀಡಿದ್ದ ಹೇಳಿಕೆ ಸಖತ್ ಸೌಂಡ್ ಮಾಡುತ್ತಿದೆ.

ಬೆಂಗಳೂರು: ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನದಿ ನೀರಿನ ಹಂಚಿಕೆ ವಿವಾದವು ದಶಕಗಳಿಂದಲೂ ಬಗೆಹರಿದಿಲ್ಲ. ಉಭಯ ರಾಜಗಳ ನಡುವಿನ ಈ ವಿವಾದ ಹಲವಾರು ವರ್ಷಗಳಿಂದ ಜೀವಂತವಾಗಿದೆ. ಕಾವೇರಿ ನೀರು ಬಿಡುವಂತೆ ಸದಾ ಕ್ಯಾತೆ ತೆಗೆಯುವ ತಮಿಳುನಾಡು ಕರ್ನಾಟಕಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸೆ.28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ ತಮಿಳುನಾಡಿಗೆ 3000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ.
ಹೀಗಾಗಿ ಪ್ರತಿಬಾರಿಯೂ ಹಿನ್ನೆಡೆ ಅನುಭವಿಸುವ ಕರ್ನಾಟಕಕ್ಕೆ ನೀರು ಬಿಡುವ ಅನಿವಾರ್ಯತೆ ಎದುರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ರೈತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್ ಆಚರಿಸಿದ್ದು, ಸೆ.29ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಕಾವೇರಿ ನದಿ ನೀರಿಗಾಗಿ ಉಗ್ರ ಹೋರಾಟ ನಡೆಯುವ ಸಾಧ್ಯತೆ ಇದೆ.
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿನ ವಿವಾದ ತಾರಕಕ್ಕೇರಿರುವ ನಡುವೆ ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೀಡಿದ್ದ ಹೇಳಿಕೆ ಸಖತ್ ಸೌಂಡ್ ಮಾಡುತ್ತಿದೆ. ಕಾವೇರಿ ಜಲ ವಿವಾದ ವಿಚಾರದಲ್ಲಿ ಧೋನಿ ನಡೆ ಪ್ರಸಂಶನೀಯ ಎನಿಸಿಕೊಂಡಿದೆ. 2018ರಲ್ಲಿ ಕಾವೇರಿ ಹೋರಾಟ ಬೆಂಬಲಿಸಿ ತಮಿಳುನಾಡು ಪರ ಕಪ್ಪು ಪಟ್ಟಿ ಧರಿಸಿ ಆಡುವಂತೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿಗೆ ಒತ್ತಾಯಿಸಲಾಗಿತ್ತು.
ಉಭಯ ರಾಜ್ಯಗಳ ಜಲವಿವಾದದ ವಿಚಾರವಾಗಿ ಧೋನಿ ನೀಡಿದ ಹೇಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ನಾನು ಇಲ್ಲಿ ಆಟ ಆಡುವುದಕ್ಕೆ ಬಂದವನು. ಹೀಗಾಗಿ ನಾನು ಯಾವುದೇ ಕಾರಣಕ್ಕೂ ಕರ್ನಾಟಕದ ವಿರೋಧಿಯಾಗುವುದಿಲ್ಲ. ನಾನು ಇಡೀ ದೇಶದ ಸ್ವತ್ತು’ ಅಂತಾ ಹೇಳುವ ಮೂಲಕ ಧೋನಿ ಪ್ರಬುದ್ಧತೆ ತೋರಿದ್ದರು. ಧೋನಿ ಅವರ ಅಂದಿನ ಹೇಳಿಕೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿರುವ ರೈತರಿಗೆ ಕನ್ನಡಪರ ಸಂಘಟನೆಗಳು ಮತ್ತು ಸ್ಯಾಂಡಲ್ವುಡ್ ನಟರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಭಾರತ ತಂಡದ ಆಟಗಾರ ಕೆ.ಎಲ್.ರಾಹುಲ್ ಸಹ ಅನ್ನದಾತರಿಗೆ ಬೆಂಬಲ ಸೂಚಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1