WhatsApp: ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ: ವಾಟ್ಸ್​ಆ್ಯಪ್​ನಿಂದ ಬೆರಗುಗೊಳಿಸುವ ಅಪ್ಡೇಟ್

WhatsApp may extend status duration: ವಾಟ್ಸಾಪ್ ಅಪ್‌ಡೇಟ್‌ಗಳ ಬಗ್ಗೆ ಸದಾ ಮಾಹಿತಿಯನ್ನು ತಿಳಿಸುವ WABetaInfo ನ ವರದಿಯ ಪ್ರಕಾರ, ಕಂಪನಿಯು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎರಡು ವಾರಗಳವರೆಗೆ ಲೈವ್ ಆಗಿ ಇರಿಸಲು ಅನುಮತಿಸುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಬಳಕೆದಾರರು ತಮ್ಮ ಸ್ಟೇಟಸ್ ಗೋಚರಿಸುವ ಅವಧಿಯನ್ನು ನಿಗದಿ ಪಡಿಸುವ ಆಯ್ಕೆಯನ್ನು ಸಹ ಹೊಂದಿರುತ್ತಾರೆ ಎನ್ನಲಾಗಿದೆ.

2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ದಿನಕ್ಕೊಂದು ನೂತನ ಫೀಚರ್​ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್​ಆ್ಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್​ಆ್ಯಪ್​ ವಿಸ್ತರಿಸಲಿದೆಯಂತೆ.

ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ ಬಗ್ಗೆ ಸದಾ ಮಾಹಿತಿಯನ್ನು ತಿಳಿಸುವ WABetaInfo ನ ವರದಿಯ ಪ್ರಕಾರ, ಕಂಪನಿಯು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎರಡು ವಾರಗಳವರೆಗೆ ಲೈವ್ ಆಗಿ ಇರಿಸಲು ಅನುಮತಿಸುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಬಳಕೆದಾರರು ತಮ್ಮ ಸ್ಟೇಟಸ್ ಗೋಚರಿಸುವ ಅವಧಿಯನ್ನು ನಿಗದಿ ಪಡಿಸುವ ಆಯ್ಕೆಯನ್ನು ಸಹ ಹೊಂದಿರುತ್ತಾರೆ ಎನ್ನಲಾಗಿದೆ.

ಮುಂಬರುವ ಅಪ್‌ಡೇಟ್‌ನಲ್ಲಿ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸ್ಟೇಟಸ್ ವಿಭಾಗದಲ್ಲಿ ನಾಲ್ಕು ಅವಧಿಯ ಆಯ್ಕೆಗಳನ್ನು ಒದಗಿಸುವ ನಿರೀಕ್ಷೆಯಿದೆ: 24 ಗಂಟೆಗಳು, 3 ದಿನಗಳು, 1 ವಾರ ಮತ್ತು 2 ವಾರಗಳು. ಇದು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎಷ್ಟು ಸಮಯದವರೆಗೆ ವೀಕ್ಷಿಸಲು ಲಭ್ಯವಾಗಬೇಕೆಂದು ಬಯಸುತ್ತಾರೆ ಎಂಬುದರ ಕುರಿತು ಆಗಿದೆ.

ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ

ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ. ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Source : https://tv9kannada.com/technology/whatsapp-working-on-a-feature-that-will-allow-users-to-keep-their-status-live-for-up-to-two-weeks-vb-681839.html

Views: 0

Leave a Reply

Your email address will not be published. Required fields are marked *