Champions Trophy 2025: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಅದಕ್ಕೂ ಮುನ್ನ ಮಾರ್ಚ್ 2ರಂದು ದುಬೈನಲ್ಲಿ ನಡೆಯಲ್ಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಪಂದ್ಯವು ಮಧ್ಯಾಹ್ನ 2:30ಕ್ಕೆ ಪ್ರಾರಂಭವಾಗುತ್ತದೆ ಮತ್ತು ಜಿಯೋ ಹಾಟ್ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ನಲ್ಲಿ ನೇರಪ್ರಸಾರವಾಗಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ, ಲೀಗ್ ಹಂತದಲ್ಲಿ ಆಡಿರುವ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಲೀಗ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 5 ವಿಕೆಟ್ಗಳಿಂದ ಮಣಿಸಿದ್ದ ರೋಹಿತ್ ಪಡೆ, ಆ ಬಳಿಕ ಬದ್ಧವೈರಿ ಪಾಕಿಸ್ತಾನ ವಿರುದ್ಧ ನಡೆದಿದ್ದ ಹೈವೋಲ್ಟೇಜ್ ಕದನವನ್ನು ಸಹ ಗೆದ್ದುಕೊಂಡಿತ್ತು. ಇದೀಗ ಲೀಗ್ ಹಂತದಲ್ಲಿ ತನ್ನ ಕೊನೆಯ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಕೂಡ ಭಾರತವನ್ನು ಮಣಿಸಿ ಸೆಮೀಸ್ಗೆ ಕಾಲಿಡಲು ತಯಾರಿ ನಡೆಸಿದೆ. ಆದರೆ ಅದಕ್ಕೂ ಮೊದಲು ಈ ಉಭಯ ತಂಡಗಳ ಪಂದ್ಯ ಯಾವಾಗ, ಎಲ್ಲಿ, ಯಾವ ಸಮಯಕ್ಕೆ ಆರಂಭವಾಗಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದರ ವಿವರವನ್ನು ತಿಳಿದಕೊಳ್ಳೋಣ..
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿಯ ಈ ಪಂದ್ಯವು ಮಾರ್ಚ್ 2 ರ ಭಾನುವಾರದಂದು ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿಯ ಈ ಪಂದ್ಯವು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯವು ಭಾರತೀಯ ಸಮಯ ಮಧ್ಯಾಹ್ನ 2.30 ಕ್ಕೆ ನಡೆಯಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಪಂದ್ಯದ ನೇರ ಪ್ರಸಾರವನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ವಿಲ್ ಒ’ರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಜಾಕೋಬ್ ಡಫಿ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.