Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?
Sports

IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

June 4, 2023
samagrasuddi

IPL 2024: ಕಳೆದ 16 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಲೀಗ್​ ಹಂತದಿಂದಲೇ ಹೊರಬಿದ್ದು ನಿರಾಸೆ ಮೂಡಿಸಿತು.ಅದರಲ್ಲೂ 14 ಪಂದ್ಯಗಳಲ್ಲಿ 7 ರಲ್ಲಿ ಮಾತ್ರ ಜಯ ಸಾಧಿಸಿರುವ ಆರ್​ಸಿಬಿ ತಂಡದ ನಾಯಕತ್ವದ ಬಗ್ಗೆ ಇದೀಗ ಪ್ರಶ್ನೆಗಳೆದ್ದಿವೆ. ಏಕೆಂದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ 7 ಪಂದ್ಯಗಳನ್ನಾಡಿದೆ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ.
ಇನ್ನು 2019 ರ ಬಳಿಕ ಆರ್​ಸಿಬಿ ತಂಡವು ಇದೇ ಮೊದಲ ಬಾರಿಗೆ ಲೀಗ್ ಹಂತದಿಂದಲೇ ಹೊರಬಿದ್ದಿದೆ. ಇದೇ ಕಾರಣದಿಂದಾಗಿ ಇದೀಗ ಫಾಫ್ ಡುಪ್ಲೆಸಿಸ್ ಅವರ ನಾಯಕತ್ವದ ಮೇಲೆ ಪ್ರಶ್ನೆಗಳೆದ್ದಿವೆ.ಏಕೆಂದರೆ ಡುಪ್ಲೆಸಿಸ್ ಕಳೆದ ಎರಡು ಸೀಸನ್​ಗಳಿಂದ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಒಟ್ಟು 27 ಪಂದ್ಯಗಳಲ್ಲಿ ಫಾಫ್ ಸಾರಥ್ಯದಲ್ಲಿ ಆರ್​ಸಿಬಿ ಕಣಕ್ಕಿಳಿದಿದೆ. ಈ ವೇಳೆ ಗೆದ್ದಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ. ಅಂದರೆ ಡುಪ್ಲೆಸಿಸ್ ನಾಯಕತ್ವದಲ್ಲಿ ಆರ್​ಸಿಬಿ 13 ಪಂದ್ಯಗಳಲ್ಲಿ ಸೋತಿದೆ.ಮತ್ತೊಂದೆಡೆ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಆ ಮೂರು ಪಂದ್ಯಗಳಲ್ಲಿ 1 ಮ್ಯಾಚ್ ಗೆದ್ದಿರುವುದು ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ತವರಿನಲ್ಲಿ ಡುಪ್ಲೆಸಿಸ್ ಕ್ಯಾಪ್ಟನ್ಸಿಯಲ್ಲಿ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.ಇನ್ನು ಡುಪ್ಲೆಸಿಸ್ ಅನುಪಸ್ಥಿತಿಯಲ್ಲಿ ಈ ಬಾರಿ ಆರ್​ಸಿಬಿ ತಂಡವನ್ನು ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸಿದ್ದರು. ಈ ವೇಳೆ ತಮ್ಮ ಹಿಂದಿನ ಆಕ್ರಮಣಶೀಲಾ ನಾಯಕತ್ವದೊಂದಿಗೆ ಗಮನ ಸೆಳೆದಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ಫ್ರಾಂಚೈಸಿ ಮತ್ತೆ ಕೊಹ್ಲಿಗೆ ನಾಯಕತ್ವ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ. ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.ಇತ್ತ ಸತತ ಎರಡು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ತಂಡವನ್ನು ಮುನ್ನಡೆಸಿದರೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅತ್ತ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 3 ಬಾರಿ ಪ್ಲೇಆಫ್ಸ್ ಪ್ರವೇಶಿಸಿದರೆ, ಒಂದು ಬಾರಿ ಫೈನಲ್ ಪಂದ್ಯವನ್ನಾಡಿದೆ. ಎಲ್ಲಾ ಕಾರಣಗಳಿಂದಾಗಿ ಆರ್​ಸಿಬಿ ಫ್ರಾಂಚೈಸಿಯು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮತ್ತೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

source https://tv9kannada.com/photo-gallery/cricket-photos/ipl-2024-rcb-captain-2024-who-will-be-rcb-captain-in-ipl-2024-kannada-news-zp-594160.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ
RPPL Karting SuperSeries: ‘ಕಾರ್ಟಿಂಗ್ ಸೂಪರ್‌ಸೀರೀಸ್’ನಲ್ಲಿ ರಚಿತ್ ಸಿಂಘಾಲ್ ಚಾಂಪಿಯನ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
Copyright © 2026
CONTACT US
Theme by: Theme Horse
Proudly Powered by: WordPress