ಮಹಿಳಾ ಏಕದಿನ ವಿಶ್ವಕಪ್ 2025: ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ.

ಮಹಿಳಾ ಏಕದಿನವಿಶ್ವಕಪ್‌ನಲ್ಲಿಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಗುವಾಹಟಿಯಬರ್ಸಾಪಾರಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 59 ರನ್ ಗಳ ಜಯ ಸಾಧಿಸಿದೆ. ಮಳೆಯಿಂದಾಗಿ 47 ಓವರ್‌ಗಳಿಗೆಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಮನ್ಜೋತ್ ಕೌರ್ (54) ಹಾಗೂ ದೀಪ್ತಿ ಶರ್ಮಾ ಅರ್ಧಶತಕ ಬಾರಿಸಿದ್ದರು . ಈ ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 47 ಓವರ್ ‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು .

270 ರನ್ ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 45.4 ಓವರ್‌ಗಳಲ್ಲಿ 211 ರನ್ ಗಳಿಸಿ ಆಲೌಟ್ ಆಗಿದೆ. ಈ ಮ‌ೂಲಕ ಟೀಮ್ ಇಂಡಿಯಾ 59 ರನ್ ಗಳ ಜಯ ಸಾಧಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದೆ.

ಶ್ರೀಲಂಕಾ ಪ್ಲೇಯಿಂಗ್ 11: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ಅಚಿನಿ ಕುಲಸೂರಿಯಾ, ಸುಗಂದಿಕಾ ಕುಮಾರಿ, ಉದೇಶಿಕಾ ಪ್ರಬೋಧನಿ, ಇನೋಕಾ ರಣವೀರ.

ಭಾರತ ಪ್ಲೇಯಿಂಗ್ 11: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.

Views: 4

Leave a Reply

Your email address will not be published. Required fields are marked *