ಚಿತ್ರದುರ್ಗ ಡಿ.04:
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಪರಿನಿಬ್ಬಾಣದ ಅಂಗವಾಗಿ ಜಿಲ್ಲಾ ಪತ್ರಿಕಾ ಭವನದಲ್ಲಿ ಡಿಸೆಂಬರ್ 6ರಂದು ಬೆಳಿಗ್ಗೆ 10.30ಕ್ಕೆ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಂಘಟಕ ಬಿ.ರಾಜಪ್ಪ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಮಾದಿಗ ಯುವಸೇನೆ ಮತ್ತು ಸ್ಲಂ ಜನರ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಬಿ. ತಿಪ್ಪೇಸ್ವಾಮಿ ಜೆಜೆ ಹಟ್ಟಿ ಉದ್ಘಾಟಿಸಲಿದ್ದಾರೆ. ಮಾದಿಗ ಮಹಾಸಭೆಯ ಅಧ್ಯಕ್ಷ ಹನುಮಂತಪ್ಪ ದುರ್ಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ವಿ. ಸೇತುರಾಮ್ ಪ್ರಾಸ್ತಾವಿಕ ಭಾಷಣ ಮಾಡುವರು. ಸಾಹಿತಿ ಡಾ. ಎಂ. ವೇದಾಂತ ಏಳಂಜಿ, ಲಿಡ್ಕರ್ ಮಾಜಿ ಅಧ್ಯಕ್ಷ ಓ. ಶಂಕರ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್. ಮಂಜಪ್ಪ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ಸೇರಿದಂತೆ ಹಲವು ಮುಖಂಡರು, ಸಮಾಜಸೇವಕರು ಮತ್ತು ಗಣ್ಯರು ಭಾಗಿಯಾಗಲಿದ್ದಾರೆ.
ಸಂಘಟಕರು ಈ ವಿಚಾರಗೋಷ್ಠಿಯಿಂದ ಸಮಾಜಮುಖಿ ಚಿಂತನೆ, ಸಮಾನತೆ ಮತ್ತು ಹಕ್ಕುಗಳ ಅರಿವು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.