ಅನುಪಮಾ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಜಿಲ್ಲಾ ಅರಣ್ಯ ಇಲಾಖಾ ವತಿಯಿಂದ ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .
![](https://samagrasuddi.co.in/wp-content/uploads/2024/06/image-56-1024x538.png)
ಚಿತ್ರದುರ್ಗ : ಅನುಪಮ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಆಶ್ರಯದಲ್ಲಿ ಬುಧವಾರ ನಗರ ಹೊರವಲಯದ ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ವಲಯ ಅರಣ್ಯಾಧಿಕಾರಿ ಎನ್ ವಾಸುದೇವ ಮಾತನಾಡಿ, ಸಸಿಗಳನ್ನು ಹಾಕುವುದರಿಂದ ಆಗುವ ಪ್ರಯೋಜನಗಳು ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳು ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡಿದರು.
ಅನುಪಮ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಎಸ್. ಭಾಸ್ಕರ್, ಕಾರ್ಯದರ್ಶಿ ಎಸ್.ಬಿ. ರಕ್ಷಣ್, ಪ್ರಾಂಶುಪಾಲ ಸಂಪತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.