WPL 2025: ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ 10ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿದೆ. ಶಫಾಲಿ ವರ್ಮಾ (44) ಮತ್ತು ಜೆಸ್ ಜೊನಾಸ್ಸೆನ್ (52*) ಅವರ ಅದ್ಭುತ ಬ್ಯಾಟಿಂಗ್ನಿಂದ ದೆಹಲಿ ತಂಡ ಸುಲಭ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ದೆಹಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಬೆಂಗಳೂರಿನಲ್ಲಿ ನಡೆದ ಡಬ್ಲ್ಯುಪಿಎಲ್ನ 10 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಹಾಲಿ ಚಾಂಪಿಯನ್ ಆರ್ಸಿಬಿ ಕುಸಿತ ಕಂಡಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ ಕೇವಲ 127 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಇನ್ನು 29 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ಗುಜರಾತ್ಗೆ ಆರಂಭದಲ್ಲೇ ಆಘಾತ
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಹೀಗಾಗಿ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದ ಗುಜರಾತ್ ಪವರ್ಪ್ಲೇನಲ್ಲಿ ನಾಲ್ಕು ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿತು. ಆ ಬಳಿಕವೂ ತಂಡ ನಿಗದಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳತ ಸಾಗಿತು. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಭಾರತಿ ಫುಲ್ಮಾಲಿ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಾಯದಿಂದ ಅಜೇಯ 40 ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ ಜೈಂಟ್ಸ್ 20 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ 127 ರನ್ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
ಶಫಾಲಿ-ಜೆಸ್ ಜೊತೆಯಾಟ
ಗುಜರಾತ್ ಜೈಂಟ್ಸ್ ನೀಡಿದ 128 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೂ ಆರಂಭಿಕ ಆಘಾತ ಎದುರಾಯಿತು. ನಾಯಕಿ ಮೆಗ್ ಲ್ಯಾನಿಂಗ್ ಕೇವಲ 3 ರನ್ಗಳಿಗೆ ಔಟಾದರು. ಆದರೆ ಶಫಾಲಿ ವರ್ಮಾ ಮತ್ತು ಜೆಸ್ ಜೊನಾಸ್ಸೆನ್ ಜೋಡಿ ಗುಜರಾತ್ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದರು. ಇವರಿಬ್ಬರು ಎರಡನೇ ವಿಕೆಟ್ಗೆ 74 ರನ್ಗಳ ಜೊತೆಯಾಟ ನೀಡಿದರು. ಶಫಾಲಿ ವರ್ಮಾ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ಗಳಿಂದ 44 ರನ್ ಗಳಿಸಿ ಔಟಾದರು.
ಜೆಸ್ ಜೊನಾಸ್ಸೆನ್ ಅರ್ಧಶತಕ
ಶಫಾಲಿ ವರ್ಮಾ ಔಟಾದ ನಂತರ, ಜೆಸ್ ಜೊನಾಸ್ಸೆನ್ ಮತ್ತು ಜೆಮಿಮಾ ರೊಡ್ರಿಗಸ್ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ವಾಸ್ತವವಾಗಿ, ಜೆಸ್ ಒಂದು ಬದಿಯಲ್ಲಿ ಆಕ್ರಮಣಕಾರಿಯಾಗಿ ಆಡಿ 27 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಾಯದಿಂದ ಅರ್ಧಶತಕವನ್ನು ಪೂರೈಸಿದರು. ತಂಡಕ್ಕೆ 45 ಎಸೆತಗಳಲ್ಲಿ ಕೇವಲ 14 ರನ್ಗಳು ಬೇಕಾಗಿದ್ದಾಗ ಜೆಮಿಮಾ 9 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಷ್ಟೊತ್ತಿಗಾಗಲೇ ಪಂದ್ಯ ದೆಹಲಿಯ ಪರವಾಗಿತ್ತು.