Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC Final 2023: ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರನಿಗೆ ಗಾಯ..!
Sports

WTC Final 2023: ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರನಿಗೆ ಗಾಯ..!

June 5, 2023
samagrasuddi

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ದಿನಗಳು ಮಾತ್ರ ಉಳಿದಿರುವಾಗ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಎದುರಾಗಿದೆ. ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ.ಹೌದು, ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಗೊಂಡಿದ್ದಾರೆ. ಭಾರತದ ನೆಟ್ ಬೌಲರ್ ಅನಿಕೇತ್ ಚೌಧುರಿ ಅವರ ರೈಸಿಂಗ್ ಎಸೆತದಿಂದ ಕಿಶನ್ ಅವರ ಕೈಗೆ ಪೆಟ್ಟಾಗಿದೆ. ತಕ್ಷಣವೇ ಅಭ್ಯಾಸ ನಿಲ್ಲಿಸಿದ ಇಶಾನ್ ಕಿಶನ್, ಆ ಬಳಿಕ ಕೈಗೆ ಬ್ಯಾಂಡೇಜ್​ನೊಂದಿಗೆ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಗಾಯದ ಗಂಭೀರತೆ ಬಗ್ಗೆ ಇನ್ನೂ ಕೂಡ ಯಾವುದೇ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.ಒಂದು ವೇಳೆ ಗಾಯ ಗಂಭೀರವಾಗಿದ್ದರೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಿಂದ ಹೊರಗುಳಿಯಬಹುದು. ಇದರ ಹೊರತಾಗಿ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.ಏಕೆಂದರೆ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಸ್ ಭರತ್ ಸ್ಥಾನ ಪಡೆದಿದ್ದು, ಇಶಾನ್ ಕಿಶನ್ ಅಲಭ್ಯರಾದರೆ ಭರತ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

source https://tv9kannada.com/photo-gallery/cricket-photos/wtc-final-2023-injury-concerns-for-team-india-as-ishan-kishan-kannada-news-zp-594640.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Sakshi Malik: ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ ಎಂದ ಸಾಕ್ಷಿ ಮಲಿಕ್
WTC Final 2023: ‘ಫೈಟರ್, ಸೂಪರ್ ಸ್ಟಾರ್, ಗಂಡುಗಲಿ’; ಕಿಂಗ್ ಕೊಹ್ಲಿಯ ಗುಣಗಾನ ಮಾಡಿದ ಆಸೀಸ್ ಕ್ರಿಕೆಟಿಗರು..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress