WTC Final 2023: ಡಬ್ಲ್ಯುಟಿಸಿ ಫೈನಲ್​ಗೂ ಮುನ್ನ ಟೀಂ ಇಂಡಿಯಾಗೆ ಹೊಸಬರ ಎಂಟ್ರಿ..!

ಐಪಿಎಲ್ ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಲಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಫೈನಲ್ ಮತ್ತು ಗ್ರ್ಯಾಂಡ್ ಫಿನಾಲೆ ಆಯೋಜಿಸಲಾಗಿದೆ. ಈ ಪಂದ್ಯಾವಳಿಯು ಜೂನ್ 7 ರಿಂದ 11 ರ ನಡುವೆ ನಡೆಯಲಿದ್ದು ಜೂನ್ 12 ಮೀಸಲು ದಿನವಾಗಲಿದೆ.ಈ ಗ್ರ್ಯಾಂಡ್ ಫೈನಲ್ ಪಂದ್ಯಕ್ಕೂ ಮುನ್ನ ಬಿಸಿಸಿಐ ದೊಡ್ಡ ಹೆಜ್ಜೆ ಇಟ್ಟಿದ್ದು, ಅನಿಲ್ ಪಟೇಲ್ ಅವರನ್ನು ಟೀಮ್ ಮ್ಯಾನೇಜರ್ ಆಗಿ ನೇಮಿಸಿದೆ.ಅನಿಲ್ ಪಟೇಲ್ ಈ ಹಿಂದೆ ಗುಜರಾತ್ ಕ್ರಿಕೆಟ್ ತಂಡದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ, ಅನಿಲ್ ಪಟೇಲ್ 2017, 18 ಮತ್ತು 19 ರ ಅವಧಿಯಲ್ಲಿ ಟೀಮ್ ಇಂಡಿಯಾದ ಮ್ಯಾನೇಜರ್ ಕೂಡ ಆಗಿದ್ದರು. ಪಟೇಲ್ ಅಧಿಕಾರಾವಧಿಯಲ್ಲಿ ಟೀಂ ಇಂಡಿಯಾ 9 ಸರಣಿಗಳನ್ನು ಆಡಿದ್ದು ಈ 9 ಸರಣಿಗಳಲ್ಲಿಯೂ ಗೆದ್ದಿದೆ.2021-23ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಒಟ್ಟು 18 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಪೈಕಿ 10 ಪಂದ್ಯಗಳನ್ನು ಗೆದ್ದಿದೆ. ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡುತ್ತಿರುವುದು ಇದು ಸತತ ಎರಡನೇ ಬಾರಿ. ಅದಕ್ಕೂ ಮುನ್ನ ಟೀಂ ಇಂಡಿಯಾ 2021ರಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿ ಸೋತಿತ್ತು.WTC ಫೈನಲ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಸ್ ಭರತ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್.WTC ಫೈನಲ್‌ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ ಮತ್ತು ಮ್ಯಾಥ್ಯೂ ರೆನ್ಶಾ.

source https://tv9kannada.com/photo-gallery/cricket-photos/wtc-final-2023-anil-patel-appointed-as-indian-teams-manager-for-world-test-championship-final-psr-581806.html

Leave a Reply

Your email address will not be published. Required fields are marked *