Skip to content
  • Sunday, March 22, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • WTC Final 2023: ‘ನಾವು ಮೊದಲ ದಿನವೇ ಸೋತೆವು’! ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
Sports

WTC Final 2023: ‘ನಾವು ಮೊದಲ ದಿನವೇ ಸೋತೆವು’! ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

June 12, 2023
samagrasuddi

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ. ಅತಿ ಹೆಚ್ಚು ಕ್ರಿಕೆಟ್ ನೋಡುವ ಜನಸಂಖ್ಯೆ. ಹೆಚ್ಚು ಸಂಭಾವನೆ, ನಿರೀಕ್ಷೆಗೂ ಮೀರಿದ ಸೌಲಭ್ಯ ಪಡೆಯುವ ಟೀಂ ಇಂಡಿಯಾಕ್ಕೆ ಕಳೆದ 10 ವರ್ಷಗಳಿಂದ ಒಂದೇ ಒಂದು ಐಸಿಸಿ ಪ್ರಶಸ್ತಿಯನ್ನು ಗೆಲ್ಲಲಾಗಿಲ್ಲ. ಡಬ್ಲ್ಯುಟಿಸಿ ಫೈನಲ್​ನಲ್ಲಿ ಆಸೀಸ್ ವಿರುದ್ಧ ಸೋತ ಭಾರತ ಮತ್ತೊಮ್ಮೆ ಖಾಲಿ ಕೈಯಲ್ಲಿ ತವರಿಗೆ ಮರಳುತ್ತಿದೆ. ಇದೀಗ ಟೀಂ ಇಂಡಿಯಾದ ಸೋಲಿನ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ರೋಜರ್ ಭಿನ್ನಿ, ಸೋಲಿಗೆ ವಿಚಿತ್ರ ಕಾರಣ ನೀಡಿದ್ದಾರೆ.ಓವಲ್‌ನಲ್ಲಿ ನಡೆದ ಫೈನಲ್‌ನ ಕೊನೆಯ ದಿನವಾದ ಜೂನ್ 11 ಭಾನುವಾರದಂದು ಭಾರತ ತಂಡ ಕೇವಲ 234 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ ನೀಡಿದ್ದ 444 ರನ್‌ಗಳ ಗುರಿಯ ಮುಂದೆ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಸೋಲಿನ ನಂತರ ತಂಡದ ಸೋಲಿನ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ನಡುವಿನ ಜೊತೆಯಾಟವೇ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ವರದಿ ಪ್ರಕಾರ, ಮೊದಲ ದಿನವೇ ಪಂದ್ಯ ಭಾರತದ ಕೈಯಿಂದ ಜಾರಿತು. ಸ್ಮಿತ್ ಮತ್ತು ಹೆಡ್ ದ್ವಿಶತಕದ ಜೊತೆಯಾಟ ಆಡಿಲ್ಲದಿದ್ದರೆ, ಪಂದ್ಯದಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿರುತ್ತಿದ್ದವು ಎಂದು ಬಿನ್ನಿ ಹೇಳಿದ್ದಾರೆ. ವಾಸ್ತವವಾಗಿ ಬಿನ್ನಿ ನೀಡಿರುವ ಹೇಳಿಕೆ ಅಸಂಬದ್ಧವಾಗಿದೆ ಎಂದೇ ಹೇಳಬಹುದು. ಏಕೆಂದರೆ ಆಸ್ಟ್ರೇಲಿಯಾ ಕೂಡ ಟೀಂ ಇಂಡಿಯಾದಂತೆಯೇ ತಮ್ಮ ಅಗ್ರ ಕ್ರಮಾಂಕದ ವಿಕೆಟ್ಗಳನ್ನು ಬೇಗನೆ ಕಳೆದುಕೊಂಡಿತು. ಆದರೆ ಮಧ್ಯಮ ಕ್ರಮಾಂಕ ಆಸೀಸ್ ತಂಡದ ಕೈ ಹಿಡಿಯಿತು. ಆದರೆ ಟೀಂ ಇಂಡಿಯಾದಲ್ಲಿ ಆ ಹೋರಾಟ ನೋಡಲಿಲ್ಲ. ಅದೇ ರೀತಿ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಆಸೀಸ್ ತಂಡದ ಬ್ಯಾಟ್ಸ್‌ಮನ್‌ಗಳ ನಡುವೆ ಪ್ರಮುಖ ಜೊತೆಯಾಟ ಕಂಡುಬಂತು. ಆದರೆ ಟೀಂ ಇಂಡಿಯಾ ಅಂತಹ ಜೊತೆಯಾವನ್ನು ನಡೆಸಲೇ ಇಲ್ಲ.ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 469 ರನ್ ಗಳಿಸಿದ್ದು, ಮೊದಲ ದಿನವೇ 327 ರನ್ ಕಲೆಹಾಕಿತು. ಇದರಲಿ ಬಹುಪಾಲು ಸ್ಮಿತ್ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ 285 ರನ್​ಗಳ ಜೊತೆಯಾಟವೇ ಪ್ರಮುಖವಾಗಿತ್ತು.ಇನ್ನು ಭವಿಷ್ಯದ ಪಂದ್ಯಾವಳಿ ಬಗ್ಗೆ ಮಾತನಾಡಿದ ಬಿನ್ನಿ, ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಬಗ್ಗೆ ಗಮನಹರಿಸುವಂತೆ ಟೀಂ ಇಂಡಿಯಾವನ್ನು ಕೇಳಿಕೊಂಡಿದ್ದಾರೆ. ಭವಿಷ್ಯದಲ್ಲಿ ವಿಶ್ವಕಪ್​ನಂತಹ ದೊಡ್ಡ ಪಂದ್ಯಾವಳಿ ಇದೆ. ಆದ್ದರಿಂದ ನಾವು ಉತ್ಸಾಹ ಕಳೆದುಕೊಳ್ಳಬಾರದು. ತವರಿನಲ್ಲಿ ವಿಶ್ವಕಪ್ ಆಡುತ್ತಿರುವುದರಿಂದ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಬೇಕು ಎಂದು ಬಿನ್ನಿ ಹೇಳಿದರು.

source https://tv9kannada.com/photo-gallery/cricket-photos/wtc-final-2023-bcci-president-roger-binny-on-indias-humiliating-defeat-in-wtc-final-psr-599377.html

Tags: Cricket, samagrasuddi, ಸಮಗ್ರ ಸುದ್ದಿ

Post navigation

KL Rahul: ಬಡ ವಿದ್ಯಾರ್ಥಿಯ ಶಿಕ್ಷಣಕ್ಕೆ ಬೆಳಕಾದ ಕನ್ನಡಿಗ ಕೆ.ಎಲ್. ರಾಹುಲ್ : ನೆರವಿನ ಸೇತುವೆಯಾದ ಹುಬ್ಬಳ್ಳಿಯ ಗೆಳೆಯರು
KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
  • Life Cycle Mutual Funds: ಸೆಬಿಯ ಹೊಸ ಮ್ಯೂಚುವಲ್ ಫಂಡ್ ನಿಯಮ, ಲಾಭ ಮತ್ತು ಅನಾನುಕೂಲಗಳ ಸಂಪೂರ್ಣ ಮಾಹಿತಿ.
  • RCB Ticket Scam Alert: ಐಪಿಎಲ್ ಟಿಕೆಟ್ ಹೆಸರಿನಲ್ಲಿ ವಂಚನೆ; ಬೆಂಗ್ಳೂರು ಪೊಲೀಸರಿಂದ ಹೈ-ಅಲರ್ಟ್!
  • ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.
  • ​Day Special, ಮಾರ್ಚ್ 22: ಇತಿಹಾಸದ ಪುಟಗಳಲ್ಲಿನ ಸುವರ್ಣ ಅಕ್ಷರಗಳು ಮತ್ತು ವಿಶ್ವ ಜಲ ದಿನದ ವಿಶೇಷತೆ
Copyright © 2026
CONTACT US
Theme by: Theme Horse
Proudly Powered by: WordPress