Skip to content
  • Wednesday, March 25, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC Final 2023: ಡಬ್ಲ್ಯುಟಿಸಿ ಫೈನಲ್ ಬಗ್ಗೆ ಅಸಮಾಧಾನ ಹೊರಹಾಕಿದ ಡೇವಿಡ್ ವಾರ್ನರ್
Sports

WTC Final 2023: ಡಬ್ಲ್ಯುಟಿಸಿ ಫೈನಲ್ ಬಗ್ಗೆ ಅಸಮಾಧಾನ ಹೊರಹಾಕಿದ ಡೇವಿಡ್ ವಾರ್ನರ್

June 4, 2023
samagrasuddi

ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಘಟಕ್ಕೆ ಬಂದು ನಿಂತಿದೆ. ಜೂನ್ 7 ರಿಂದ ಲಂಡನ್‌ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. ಇನ್ನು ಟೀಂ ಇಂಡಿಯಾ ಈಗಾಗಲೇ ಒಮ್ಮೆ ಫೈನಲ್ ಆಡಿದ್ದು, ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿತ್ತು. ಆದರೆ ಆಸ್ಟ್ರೇಲಿಯ ತಂಡ ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಸಜ್ಜಾಗಿದ್ದು, ಟೆಸ್ಟ್ ವಿಶ್ವಕಪ್ ಗೆಲ್ಲಲು ಸಜ್ಜಾಗಿದೆ. ಎರಡು ವರ್ಷಗಳ ಸರಣಿಯಲ್ಲಿ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಫೈನಲ್‌ಗೆ ಪ್ರಯಾಣ ಬೆಳೆಸಿದೆ. ಆದರೆ ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್​ ಡೇವಿಡ್ ವಾರ್ನರ ಗೆ ಮಾತ್ರ ಡಬ್ಲ್ಯುಟಿಸಿ ಫೈನಲ್​ ಆಡಿಸುವ ವಿಧಾನದ ಬಗ್ಗೆ ಅಸಮಾಧಾನವಿದ್ದಂತೆ ತೋರುತ್ತ್ತಿದೆ. ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.ಇಂಗ್ಲೆಂಡ್‌ನಲ್ಲಿ ತಮ್ಮ ಸಿದ್ಧತೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಎರಡು ವರ್ಷಗಳ ಕಾಲ ನಡೆಯುವ ಇಂತಹ ಶ್ರೇಷ್ಠ ಟೂರ್ನಿಯ ಫೈನಲ್ ಪಂದ್ಯವನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಂತೆ ಆಡಬೇಕೆಂದು ಹೇಳುವ ಮೂಲಕ ವಾರ್ನರ್, ಡಬ್ಲ್ಯುಟಿಸಿ ಫೈನಲ್ ವಿಧಾನದಲ್ಲಿ ಬದಲಾವಣೆ ತರಬೇಕು ಎಂದಿದ್ದಾರೆ.ಅಂದಹಾಗೆ, ಡಬ್ಲ್ಯುಟಿಸಿ ಫೈನಲ್ ವಿಧಾನದ ಬಗ್ಗೆ ಈ ರೀತಿ ಹೇಳಿಕೆ ನೀಡಿದ ಮೊದಲ ವ್ಯಕ್ತಿ ವಾರ್ನರ್ ಅಲ್ಲ. 2021 ರಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಫೈನಲ್ ಪಂದ್ಯ ನಡೆದಾಗ, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಆ ಸಮಯದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೂಡ ಫೈನಲ್‌ಗೆ ಒಂದು ಪಂದ್ಯ ಸಾಕಾಗುವುದಿಲ್ಲ ಎಂದಿದ್ದರು. ಆದರೆ, ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ಯಾಲೆಂಡರ್‌ನಿಂದಾಗಿ ಮೂರು ಪಂದ್ಯಗಳ ಸರಣಿಗೆ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಉತ್ತರವನ್ನು ಐಸಿಸಿ ನೀಡಿತ್ತು.

source https://tv9kannada.com/photo-gallery/cricket-photos/wtc-final-2023-wtc-final-it-should-be-at-least-a-three-game-series-says-david-warner-psr-594053.html

Tags: Cricket, samagrasuddi, WTC Final 2023, ಸಮಗ್ರ ಸುದ್ದಿ

Post navigation

ಏಷ್ಯಾದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಯಾರೆಂದು ತಿಳಿಸಿದ ಸೆಹ್ವಾಗ್
NAM vs KAR: 8 ಸಿಕ್ಸರ್, 13 ಫೋರ್: ನಮೀಬಿಯಾ ವಿರುದ್ಧ ಕನ್ನಡಿಗನ ಸಿಡಿಲಬ್ಬರದ ಶತಕ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
Copyright © 2026
CONTACT US
Theme by: Theme Horse
Proudly Powered by: WordPress