
ಚಿತ್ರದುರ್ಗ: ಜ.05 ಜಿಲ್ಲಾ ಆಯುಷ್ ಇಲಾಖೆ ಚಿತ್ರದುರ್ಗ, ಸರ್ಕಾರಿ ಆಯುಷ್ ಆರೋಗ್ಯ ಮಂದಿರ ಜೆ. ಏನ್. ಕೋಟೆ ವತಿಯಿಂದ ವ್ಯಾಪ್ತಿಯ ನರೆನಹಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಯೋಗ ತರಬೇತಿ ಕಾರ್ಯಕ್ರಮ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಜಿ ಎನ್ ಕೋಟೆ ಆಯುಷ್ ಆರೋಗ್ಯ ಮಂದಿರದ ಯೋಗ ತರಬೇತುದಾರ ರವಿ ಕೆ.ಅಂಬೇಕರ್ ಮಕ್ಕಳಿಗೆ ಯೋಗ ತರಬೇತಿ ನೀಡಿ ಮಾತನಾಡಿ ಯೋಗ ಕೇವಲ ವಯಸ್ಕರಿಗೆ ಮಾತ್ರ ಸೀಮಿತವಲ್ಲ; ಇದು ಮಕ್ಕಳಿಗೂ ಅತ್ಯಂತ ಪ್ರಯೋಜನಕಾರಿ. ಇಂದಿನ ಜೀವನಶೈಲಿಯಲ್ಲಿ ಮಕ್ಕಳು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತಾರೆ. ಯೋಗ ಇದನ್ನು ನಿವಾರಿಸುವಲ್ಲಿ ಬಹಳ ಸಹಕಾರಿಯಾಗಿದೆ.ಯೋಗವು ಮಕ್ಕಳ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ. ಮಕ್ಕಳನ್ನು ಚಿಕ್ಕ ವಯಸ್ಸಿನಿಂದಲೇ ಯೋಗಕ್ಕೆ ಪರಿಚಯಿಸುವುದು ಅವರ ಒಟ್ಟಾರೆ ಸುಖ ಮತ್ತು ಸಂತೋಷಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದರು.

120ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದ ಈ ತರಬೇತಿ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಸುಭಾನ್ ಹೆಚ್, ನರಸಿಂಹಪ್ಪ ಪಿ ವಿ, ನೀಲಮ್ಮ, ಮತ್ತು ಗೀತಾ ಉಪಸ್ಥಿತರಿದ್ದರು.