ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ಬೆಂಗಳೂರು: ಸಂಡೇ ಸಿನಿಮಾಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ “ಹೊಂದಿಸಿ ಬರೆಯಿರಿ” (Kannada New Movie) ಯೂಟ್ಯೂಬ್ ‌ನಲ್ಲಿ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಇನ್ನೂ ಸ್ಟ್ರೀಮ್ ಆಗುತ್ತಿದ್ದರೂ, ಇದು ಭಾರತ, ಯುಎಸ್ ಎ ಮತ್ತು ಯುಕೆ ಹೊರತಾಗಿ ಬೇರೆ ದೇಶಗಳಲ್ಲಿ ಸ್ಟ್ರೀಮ್ ಆಗುತ್ತಿಲ್ಲ. ಹಾಗಾಗಿ ಉಳಿದ ಎಲ್ಲ ದೇಶಗಳ ಕನ್ನಡಿಗರಿಗೆ ತಲುಪಬೇಕು. ಥಿಯೇಟರ್ ನಲ್ಲಿ ಚಿತ್ರ ನೋಡಿರದ ಹಾಗೂ ಒಟಿಟಿ ಚಂದಾದಾರರ ಆಗದ ಎಲ್ಲರಿಗೂ ಚಿತ್ರ ತಲುಪಲಿ ಎನ್ನುವ ಉದ್ದೇಶ ಚಿತ್ರತಂಡ ಈ ನಿರ್ಧಾರ ಮಾಡಿದೆ.

ಹೊಂದಿಸಿ ಬರೆಯಿರಿʼ ಸಿನಿಮಾಗೆ ಹಾಕಿದ್ದ ಹಣ ವಾಪಸ್ ಆಗದಿದ್ದರೂ ಚಿತ್ರತಂಡ ಇಂತಹ ಗಟ್ಟಿ ನಿರ್ಧಾರಕ್ಕೆ ಬಂದಿದೆ. ಹಾಗಂತ ಯೂಟ್ಯೂಬ್‌ನಲ್ಲಿ ರೆಂಟಲ್ ಮಾಡೆಲ್ ಆಯ್ಕೆ ಮಾಡಿ ಒಂದಿಷ್ಟು ಹಣ ನಿಗದಿಪಡಿಸಿ ನೋಡಿ ಎಂದು ಕೇಳುವುದಕ್ಕಿಂತ, ಉಚಿತವಾಗಿ ಯೂಟ್ಯೂಬ್‌ನಲ್ಲಿ ಎಲ್ಲರೂ ಸಿನಿಮಾ ನೋಡಲಿ, ಅವರಿಗೆ ಸಿನಿಮಾ ಇಷ್ಟವಾದರೆ ಮಾತ್ರ ತೋಚಿದಷ್ಟು ಹಣ ಕೊಡಲಿ ಎಂಬ ನಿರ್ಧಾರ ಮಾಡಿದೆ ಚಿತ್ರತಂಡ. ಹೀಗಾಗಿ ನಿರ್ಮಾಣ ಸಂಸ್ಥೆ “ಸಂಡೇ ಸಿನಿಮಾಸ್‌”ನ QR CODE , ಯುಪಿಐ ಐಡಿ ಹಾಗೂ ಬ್ಯಾಂಕ್ ಡಿಟೇಲ್ಸ್‌ ಅನ್ನು ಲಗತ್ತಿಸಿಲಾಗಿದೆ ಜತೆಗೆ ಯುಟ್ಯೂಬ್‌ ಡಿಸ್ಕ್ರಿಪ್ಷನ್‌ ಬಗ್ಗೆ ಮಾಹಿತಿ ಇದೆ.

ನಮ್ಮ “ಹೊಂದಿಸಿ ಬರೆಯಿರಿ” ಚಿತ್ರದ ಯುಟ್ಯೂಬ್‌ ಲಿಂಕ್‌ವನ್ನು ಸೋಷಿಯಲ್‌ ಮೀಡಿಯಾದಲ್ಲಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಶೇರ್‌ ಮಾಡುವ ಮೂಲಕ ಎಲ್ಲರಿಗೂ ತಲುಪಿಸಿ ಎಂದು ಚಿತ್ರತಂಡ ಮನವಿ ಮಾಡಿಕೊಂಡಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ನಮ್ಮ ಮುಂದಿನ ಚಿತ್ರದ ವಿವರಣೆಯನ್ನು ಆದಷ್ಟು ಬೇಗ ಹಂಚಿಕೊಳ್ಳುತ್ತೇವೆ ಎಂದಿದ್ದಾರೆ ರಾಮೇನಹಳ್ಳಿ ಜಗನ್ನಾಥ.

ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಜತೆಗೆ ಸ್ನೇಹಿತರ ಜತೆಗೂಡಿ ಸಂಡೇ ಸಿನಿಮಸ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ʻಹೊಂದಿಸಿ ಬರೆಯಿರಿʼ ಸಿನಿಮಾದಲ್ಲಿ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹದೇವ್, ಅನಿರುದ್ದ್ ಆಚಾರ್ಯ, ಭಾವನಾ ರಾವ್, ಐಶಾನಿ ಶೆಟ್ಟಿ, ಸಂಯುಕ್ತ ಹೊರ್ನಾಡ್, ಅರ್ಚನಾ ಜೋಯಿಸ್ ಹಲವರು ನಟಿಸಿದ್ದಾರೆ.

Source : https://vistaranews.com/cinema-film/kannada-new-movie-hondisi-bareyiri-in-youtube/656101.html

Views: 0

Leave a Reply

Your email address will not be published. Required fields are marked *