ಬೆಂಗಳೂರು, ಫೆಬ್ರವರಿ, 08: ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಹೊಡೆದಾಡಿಕೊಂಡ ಘಟನೆಗಳು ಹಲವೆಡೆ ನಡೆದಿವೆ. ಹಾಗೆಯೇ ಇದೀಗ ಯುವತಿಯರಿಬ್ಬರು ಬಿಎಂಟಿಸಿ ಬಸ್ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಚಪ್ಪಳಿ, ಶೂನಲ್ಲಿ ಬಡಿದಾಡಿಕೊಂಡ ವಿಚಿತ್ರ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.

ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಟು ಪೀಣ್ಯಾ ಬಸ್ನಲ್ಲಿ ಯುವತಿಯರಿಬ್ಬರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ನಡೆದಿದೆ. ಮೆಜೆಸ್ಟಿಕ್ನಿಂದ ಪೀಣ್ಯ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಯುವತಿಯರು ಮಧ್ಯೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೀವನ್ನು ಅಲ್ಲಿದ್ದ ಇನ್ನಿತರ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ಹರಿದಾಡುತ್ತಿದೆ.
ವಿದ್ಯಾರ್ಥಿ ಮೇಲೆ ಹಲ್ಲೆ: ಇನ್ನು ಇತ್ತೀಚೆಗಷ್ಟೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡವರ ಮಾರ್ಗದಿಂದ ಹಿರಿಯೂರು ಮಾರ್ಗವಾಗಿ ಬರುವ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.ಸಣ್ಣ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಪ್ರಯಾಣಿಕರ ಮಧ್ಯೆ ಜಗಳವಾಗಿದ್ದು, ಈ ಸಂಬಂಧ ವಿದ್ಯಾರ್ಥಿ ಶಿವರಾಜ್ (17) ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿತ್ತು.ಹಲ್ಲೆ ನಡೆಸಿದ್ದು ಯಾರು?: ಆದಿವಾಲ ಭೋವಿ ಕಾಲೋನಿಯ ತಿರುಮಲ ನಗರದ ಯೋಗಿ ಮತ್ತು ಸುಧಾಕರ್ ಹಾಗೂ ಇವರ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಡು ರಸ್ತೆಯಲ್ಲೆ ಖಾಸಗಿ ಬಸ್ ನಿಲ್ಲಿಸಿ ವಿದ್ಯಾರ್ಥಿ ಶಿವರಾಜ್ ಮೇಲೆ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದರು. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪೊಲೀಸರು ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1