ನೀಟ್ ಅಕ್ರಮಗಳ ತನಿಖೆಗೆ ಸಿಬಿಐ/ಎಸ್‌ಐಟಿ ಬೇಡಿಕೆ: ಚಿತ್ರದುರ್ಗದಲ್ಲಿ ಯುವ ಕಾಂಗ್ರೆಸ್ ಮನವಿ.

ಚಿತ್ರದುರ್ಗ ಮೇ. 21

ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್

ನೀಟ್ ಪರೀಕ್ಷೆಯ ಆಕ್ರಮಗಳ ಕುರಿತು ಸಿಬಿಐ / ಎಸ್‍ಐಟಿ ಅಥವಾ ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸಬೇಕು. ಸಂಬಂಧಪಟ್ಟ ಕೇಂದ್ರ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾನೂನು ಘಟಕದ ವತಿಯಿಂದ ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಲಾಯಿತು.

ನೀಟ್ ಪರೀಕ್ಷೆಯ ಅಕ್ರಮಗಳು, ವಿದ್ಯಾರ್ಥಿಗಳ ಭವಿಷ್ಯ ಹಾನಿ ಹಾಗೂ ಕೇಂದ್ರ ಶಿಕ್ಷಣ ಇಲಾಖೆಯ ವೈಫಲ್ಯದಿಂದಾಗಿ ದೇಶದಾದ್ಯಂತ ನಡೆದ ನೀಟ್ ಪರೀಕ್ಷೆಯ ಅಕ್ರಮಗಳು, ಪೇಪರ್ ಲೀಕ್, ಅಸಮಾನ ಪರೀಕ್ಷಾ ವ್ಯವಸ್ಥೆ ಹಾಗೂ ಆಡಳಿತಾತ್ಮಕ ವೈಫಲ್ಯಗಳಿಂದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ವಿದ್ಯಾರ್ಥಿಗಳು ಹಲವು ವರ್ಷಗಳ ಪರಿಶ್ರಮದಿಂದ ಪರೀಕ್ಷೆಗೆ ಸಿದ್ಧರಾಗಿದ್ದರೂ, ಕೇಂದ್ರ ಮಟ್ಟದ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆ ಕುಸಿದಿದೆ ಎಂದು ದೂರಿದರು.

ನೀಟ್ ಪರೀಕ್ಷೆಯ ಆಕ್ರಮಗಳ ಕುರಿತು ಸಿಬಿಐ / ಎಸ್‍ಐಟಿ ಅಥವಾ ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸಬೇಕು. ಸಂಬಂಧಪಟ್ಟ ಕೇಂದ್ರ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಮರುಪರಿಶೀಲಿಸಿ ಅಗತ್ಯವಿದ್ದಲ್ಲಿ ರದ್ದುಗೊಳಿಸಬೇಕು ರಾಜ್ಯ ಸರ್ಕಾರಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ಅಧಿಕಾರವನ್ನು ಮರು ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಾಂಕ್ ಓ, ಜಿಲ್ಲಾ ಉಪಾಧ್ಯಕ್ಷ ಮೈಲಾರ ಎಂ. ಕೋಟಿ.,ಗುರುಮೂರ್ತಿ ಎಂ., ಶಿವಕುಮಾರ್ ಎಸ್., ಸಂದೀಪ್ ರಾಜ್ ಪಾಡಿಗಾಟ್ಟೆ, ಕನಕ ಆಂಜನೇಯ, ಲಕ್ಷ್ಮಿಪತಿ ಎಸ್., ಜಿ. ನಾಗರಾಜ್ ಐ., ನಾಗರಾಜ್ ಜಿ,. ಲಕ್ಷ್ಮಿಕಾಂತ ಡಿ. ಇಸ್ಮಾಯಿಲ್ ಜಾಬಿಹುಲ್ಲ.ನೂರಉಲ್ಲನವೀನ್ಕುಮಾರ್ ಡಿ. ಒ. ಮುಂತಾದವರು ಬಾಗಿಯಾಗಿದ್ದರು.

Leave a Reply

Your email address will not be published. Required fields are marked *