ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. ೨೭ ಮೈಸೂರಿನಲ್ಲಿ ಏ.೨೫ ರಿಂದ ಮೂರು ದಿನಗಳ ಕಾಲ ನಡೆದ “ಯುವ ಕ್ರಾಂತಿ” ಯುವ ಕಾಂಗ್ರೆಸ್ ತರಬೇತಿ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ರವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ
ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ರಾಜ್ಯ ಪದಾಧಿಕಾರಿಗಳು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ
ಚಿತ್ರದುರ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಈ ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಉದಯ, ಅದರ ತತ್ವ ಸಿದ್ದಾಂತ, ನಾಯಕತ್ವ ಗುಣಗಳನ್ನು ಬೆಳಸುವ ಬಗ್ಗೆ ಇಂದಿನ ಯುವ
ಪೀಳಿಗೆಗೆ ಕಾಂಗ್ರೆಸ್ ಪಕ್ಷ ಎಂದರೆ ಏನು ಅದು ಯಾಕೆ ಉದಯವಾಯಿತು. ಇದರ ಮೂಲ ಉದ್ಧೇಶಗಳು ಏನು ಎಂಬುದರ ಬಗ್ಗೆ
ಸಂಪೂರ್ಣವಾದ ಮಾಹಿತಿಯನ್ನು ನೀಡಲಾಯಿತು. ಈ ಶಿಬಿರದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦೦ ಜನತೆ
ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1