ಯುವನಿಧಿ ಪ್ಲಸ್ ಯೋಜನೆ: ಉಚಿತ ತರಬೇತಿಯೊಂದಿಗೆ ಉದ್ಯೋಗದ ಭರವಸೆ, ಅಕ್ಟೋಬರ್ 3ರೊಳಗೆ ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ಯ ಫಲಾನುಭವಿಗಳಿಗೆ ಗುಡ್ ನ್ಯೂಸ್. ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ, ಅವರಿಗೆ ಸೂಕ್ತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸರ್ಕಾರವು ‘ಯುವನಿಧಿ ಪ್ಲಸ್’ (Yuvanidhi Plus) ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

ಈ ಯೋಜನೆಯ ಅಡಿಯಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ‘ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ’ದಲ್ಲಿ (GTTC) ಉಚಿತವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ಯುವನಿಧಿ ಫಲಾನುಭವಿಗಳಿಂದ ಇದೀಗ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯಾವೆಲ್ಲಾ ವೃತ್ತಿಗಳಲ್ಲಿ ತರಬೇತಿ ಲಭ್ಯ? ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇರುವ ಈ ಕೆಳಗಿನ ಕೋರ್ಸ್‌ಗಳಲ್ಲಿ ತರಬೇತಿ ನೀಡಲಾಗುತ್ತದೆ:

  • ಅಕೌಂಟ್ಸ್ ಎಕ್ಸಿಕ್ಯೂಟಿವ್ (Accounts Executive)
  • ಡಿಜಿಟಲ್ ಮಾರ್ಕೆಟಿಂಗ್ (Digital Marketing)
  • ಸೇಲ್ಸ್ ಎಕ್ಸಿಕ್ಯೂಟಿವ್ (Sales Executive)
  • ಸ್ಯಾಪ್ (SAP)
  • ಐಓಟಿ (IoT)
  • ಪಿಎಲ್‌ಸಿ ಪ್ರೋಗ್ರಾಮಿಂಗ್ (PLC Programming)
  • ಕ್ಯಾಡ್-ಕ್ಯಾಮ್ (CAD-CAM)
  • ಸಿಎನ್‌ಸಿ (CNC)

ತರಬೇತಿಯ ವಿಶೇಷತೆಗಳು:

  • ಸಂಪೂರ್ಣ ಉಚಿತ ಕೌಶಲ್ಯ ತರಬೇತಿ.
  • ತರಬೇತಿಯು ಯಶಸ್ವಿಯಾಗಿ ಪೂರ್ಣಗೊಂಡ ನಂತರ ಸ್ಥಳೀಯವಾಗಿ ಉತ್ತಮ ವೇತನದೊಂದಿಗೆ ಉದ್ಯೋಗಾವಕಾಶ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 3
  • ತರಬೇತಿ ತರಗತಿಗಳು ಪ್ರಾರಂಭ: ಅಕ್ಟೋಬರ್ 5

ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ‘ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ), ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ’ ಇಲ್ಲಿಗೆ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ: 0836-2333159, 8123719773 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರಾದ ಮಾರುತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *