
ನವದೆಹಲಿ: ಖ್ಯಾತ ಅಥ್ಲೆಟ್, ರಾಜ್ಯಸಭಾ ಸದಸ್ಯೆ, ಪಿ ಟಿ ಉಷಾ ಅವರು ಭಾರತ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ಧ, ಪಿ ಟಿ ಉಷಾ 1984ರ ಲಾಸ್ ಏಂಜಲ್ಸ್ ಒಲಂಪಿಕ್ಸ್ ನ 400 ಮೀಟರ್ ಹರ್ಡರ್ಸ್ ನಲ್ಲಿ ಮೂರನೇ ಸ್ಥಾನ ಗಳಿಸಿದ್ದರು. ಎರಡು ದಶಕಗಳ ಕಾಲ ಭಾರತ ಮತ್ತು ಏಷ್ಯಾ ಅಥ್ಲೆಟಿಕ್ಸ್ ನಲ್ಲಿ ಮಿಂಚಿದ್ದ ಅವರು 2000ನೇ ಇಸವಿಯಲ್ಲಿ ಹಲವು ಪದಕಗಳೊಂದಿಗೆ ನಿವೃತ್ತರಾಗಿದ್ದರು.
58 ವರ್ಷದ ಪಿ ಟಿ ಉಷಾ ಅವರು ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿ ಎಲ್ ನಾಗೇಶ್ವರರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆ ಆಗಿರುತ್ತಾರೆ.
ಈ ಹಿಂದೆ ಮಹಾರಾಜ ಯಾದವೀಂದ್ರ ಸಿಂಗ್ ಬಳಿಕ ಐಒಎ ವಹಿಸಿಕೊಂಡ ಮೊದಲ ಕ್ರೀಡಾಪಟು ಎಂಬ ಶ್ರೇಯವು ಉಷಾ ಅವರದು. 1938- 196೦ ಅವಧಿಯಲ್ಲಿ ಯಾದವೀಂದ್ರ ಸಿಂಗ್ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದರು. ಕ್ರಿಕೆಟಿಗರಾಗಿದ್ದ ಅವರು 1934ರಲ್ಲಿ ಟೆಸ್ಟ್ ಪಂದ್ಯ ಒಂದನ್ನು ಆಡಿದ್ದರು.
‘ಪಯ್ಯೋಳಿ ಎಕ್ಸ್ ಪ್ರೆಸ್’ ಖ್ಯಾತಿಯ ಕೇರಳದ ಪಿ ಟಿ ಉಷಾ ಅವರನ್ನು ಭಾರತೀಯ ಜನತಾ ಪಕ್ಷವು ಜುಲೈನಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿತ್ತು.